ADVERTISEMENT

ಎಸ್‌ಐ, ಎಎಸ್‌ಐ ಅಮಾನತು

​ಪ್ರಜಾವಾಣಿ ವಾರ್ತೆ
Published 15 ಮೇ 2025, 5:24 IST
Last Updated 15 ಮೇ 2025, 5:24 IST

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಜಗದೀಶ್ ಹಾಗೂ ಸಹಾಯಕ ಸಬ್‌ಇನ್‌ಸ್ಪೆಕ್ಟರ್ ತೀರ್ಥಕುಮಾರ್ ಅವರನ್ನು ಸಾರ್ವಜನಿಕರೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ವರ್ತಿಸಿದ ಆರೋಪದ ಮೇರೆಗೆ ಅಮಾನತುಗೊಳಿಸಲಾಗಿದೆ.

ಸುಂಟಿಕೊಪ್ಪ ಸಮೀಪದ ಗರಂಗಂದೂರು ಗ್ರಾಮದಲ್ಲಿ ಈಚೆಗೆ ನಡೆದಿದ್ದ ತೆರೆ ಮಹೋತ್ಸವವೊಂದರಲ್ಲಿ ರಾತ್ರಿ ಬಸ್‌ತಂಗುದಾಣದಲ್ಲಿ ಆಟೊಗಾಗಿ ನಿಂತಿದ್ದ ಯುವಕರೊಂದಿಗೆ ಇವರು ಆಕ್ಷೇಪಾರ್ಹ ರೀತಿಯಲ್ಲಿ ವರ್ತಿಸಿದ್ದ ಕುರಿತು ಆರೋಪಗಳು ಕೇಳಿ ಬಂದಿದ್ದವು. 

‘ಇವರು ಸಾರ್ವಜನಿಕರೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ವರ್ತಿಸಿದ್ದರು ಮತ್ತು ಕರ್ತವ್ಯ ಲೋಪ ಎಸಗಿದ್ದರು ಎಂಬ ಕಾರಣಕ್ಕೆ ಕರ್ತವ್ಯದಿಂದ ಅಮಾನತುಪಡಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ‘‍ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.