ಸಿದ್ದಾಪುರ: ‘ಸಿದ್ದಾಪುರ- ವಿರಾಜಪೇಟೆ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಸಿದ್ದಾಪುರ ಬಂದ್ ಕೈಬಿಡಲಾಗಿದೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ವಿ.ಕೆ.ಗಿರೀಶ್ ತಿಳಿಸಿದ್ದಾರೆ.
‘ಕಳೆದ 11 ತಿಂಗಳಿಂದ ಸಿದ್ದಾಪುರ- ವಿರಾಜಪೇಟೆ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೆಸರಿನಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿತ್ತು. ಹಲವು ಬಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಅ.23ರಂದು ಸಿದ್ದಾಪುರ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ ಕಾಮಗಾರಿ ತ್ವರಿತಗತಿಯಲ್ಲಿ ಮಾಡುತ್ತಿದ್ದು, ಲೊಕೋಪಯೋಗಿ ಇಲಾಖೆಯ ಎ.ಇ.ಇ ಸತೀಶ್ ಸ್ಥಳ ಪರಿಶೀಲಿಸಿ ಶ್ರೀಘ್ರದಲ್ಲಿ ಶೀಘ್ರ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಂದ್ ಕೈಬಿಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಮನವಿ ಮಾಡಲಾಗಿದೆ.
ಬಂದ್ ಬಗ್ಗೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ.ಪ್ರತೀಶ್ ಸಾರ್ವಜನಿಕರ ಮನವೊಲಿಸಿ, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದರು. ಈ ಸಂದರ್ಭ ಪ್ರಮುಖರಾದ ಎ.ಎಸ್.ಮುಸ್ತಫಾ, ನವಾಜ್, ವಸೀಂ, ರಿಯಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.