ADVERTISEMENT

ಸಿದ್ದಾಪುರ | ಪ್ರತಿಭೆ ಅನಾವರಣಕ್ಕೆ ಕ್ರೀಡಾಕೂಟ ವೇದಿಕೆ: ಎ.ಎಸ್.ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 5:21 IST
Last Updated 6 ಜನವರಿ 2026, 5:21 IST
ಕ್ರಿಕೆಟ್‌ ಟೂರ್ನಿಯಲ್ಲಿ ಮೈಸೂರಿನ ರಾಜಧಾನಿ ತಂಡ ಪ್ರಥಮ ಬಹುಮಾನ ಪಡೆಯಿತು
ಕ್ರಿಕೆಟ್‌ ಟೂರ್ನಿಯಲ್ಲಿ ಮೈಸೂರಿನ ರಾಜಧಾನಿ ತಂಡ ಪ್ರಥಮ ಬಹುಮಾನ ಪಡೆಯಿತು   

ಸಿದ್ದಾಪುರ: ‘ಗ್ರಾಮೀಣ ಭಾಗದಲ್ಲಿ ನಡೆಯುವ ಕ್ರೀಡಾಕೂಟಗಳಿಂದ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತಿದೆ’ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಇಲ್ಲಿನ ಪ್ರೌಢಶಾಲಾ ಮೈದಾನದಲ್ಲಿ ಸಿದ್ದಾಪುರದ ಬ್ರದರ್ಸ್ ಯುವಕ ಸಂಘದಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರತಿಭಾನ್ವಿತ ಆಟಗಾರರು ಹೆಚ್ಚಾಗಿರುವುದು ಸಂತಸ ತಂದಿದೆ. ಯುವಕರು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯ ಮೂಲಕ ಒಗ್ಗಟ್ಟು ಪ್ರದರ್ಶಿಸುವಂತಾಗಬೇಕು ಎಂದರು.

ADVERTISEMENT

ಜಿ.ಪಂ ಮಾಜಿ ಸದಸ್ಯರಾದ ಎಂ.ಎಸ್ ವೆಂಕಟೇಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ ಪ್ರತೀಶ್, ಪ್ರಮುಖರಾದ ಉಮ್ಮರ್, ಮುದಶೀರ್ ಮುದ್ದು, ಪ್ರವೀಣ್, ಕುಂಡಚ್ಚಿರ‌ ಮಂಜು ದೇವಯ್ಯ ಹಾಜರಿದ್ದರು.

ಎರಡು ದಿನಗಳಿಂದ ಸಿದ್ದಾಪುರ ಪ್ರೌಢಶಾಲಾ ಮೈದಾನದಲ್ಲಿ ನಡೆದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಮೈಸೂರಿನ ರಾಜಧಾನಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ನೆಲ್ಯಹುದಿಕೇರಿಯ ಟೀಮ್ ಗ್ಯಾಲಕ್ಸಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಚಾಣಕ್ಯ ಬೆಸ್ಟ್ ಬ್ಯಾಟ್ಸಮನ್, ಬೆಸ್ಟ್ ಬೌಲರ್ ರಾಕೇಶ್ ಚೋಟು, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಶಾಹುಲ್ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.