ಸಿದ್ದಾಪುರ: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ 25ಕ್ಕೂ ಹೆಚ್ಚು ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಮೈಲಾತ್ ಪುರ, ಮಾರ್ಗೋಲ್ಲಿ ವ್ಯಾಪ್ತಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ಕಾಫಿ ತೋಟದಲ್ಲಿ ದಾಂದಲೆ ನಡೆಸುತ್ತಿದ್ದವು. ಇದಲ್ಲದೇ ಕಾರ್ಮಿಕರ ಮೇಲೆ ದಾಳಿಗೆ ಯತ್ನಿಸುತ್ತಿದ್ದು, ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕಾಡಾನೆಗಳು ಬೇರ್ಪಟ್ಟಿದ್ದು, ಪಟಾಕಿ ಸಿಡಿಸಿ ಅರಣ್ಯದ ಕಡೆಗೆ ಅಟ್ಟಲಾಯಿತು. ಹಿಂಡಿನಲ್ಲಿ ಸಲಗ ಸೇರಿದಂತೆ ರೇಡಿಯೊ ಕಾಲರ್ ಅಳವಡಿಸಿದ ಆನೆ ಕೂಡ ಕಂಡುಬಂತು. ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ತೆರಳುತ್ತಿದ್ದು, ಮಧ್ಯಾಹ್ನದ ಬಳಿಕ 25ಕ್ಕೂ ಹೆಚ್ಚು ಕಾಡಾನೆಗಳನ್ನು ದುಬಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಯಿತು.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪವಲಯ ಅರಣ್ಯಾಧಿಕಾರಿ ಶಶಿ, ಗಸ್ತು ಪಾಲಕರಾದ ರಾಜೇಶ್, ಆರ್.ಆರ್.ಟಿ, ಆನೆ ಕಾರ್ಯಪಡೆಯ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.