ಸಿದ್ದಾಪುರ: ದುಬಾರೆ ಮೀಸಲು ಅರಣ್ಯ ವ್ಯಾಪ್ತಿಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯು ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪತಿಯೇ ಉರುಳು ಹಾಕಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಯುತ್ತಿದೆ.
‘ಪತಿ ಪ್ರಾಣಿಗಳನ್ನು ಬೇಟೆ ಆಡುತ್ತಾರೆ ಎಂಬ ಮಹಿಳೆ ದೂರಿನ ಮೇರೆಗೆ ಸ್ಥಳ ಪರಿಶೀಲಿಸಿದಾಗ, 4 ವರ್ಷದ ಗಂಡು ಜಿಂಕೆ ಕಳೇಬರ ಕಂಡುಬಂತು’ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ. ಕುಶಾಲನಗರ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.