ಸೋಮವಾರಪೇಟೆ: ಅವೈಜ್ಞಾನಿಕ ಅರಣ್ಯ ಕಾಯ್ದೆ ವಿರುದ್ಧ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಹಾಗೂ ಸಿ ಮತ್ತು ಡಿ (ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ) ಭೂಮಿಯನ್ನು ವ್ಯವಸಾಯ ಭೂಮಿ ಎಂದು ಪರಿವರ್ತಿಸಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಆ. 19ರಂದು ಪಟ್ಟಣದಲ್ಲಿ ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ರೈತ ಹೋರಾಟ ಸಮಿತಿಯ ಸಂಚಾಲಕ ಕೆ.ಬಿ.ಸುರೇಶ್ ಹೇಳಿದರು.
ಒಕ್ಕಲಿಗರ ಸಮುದಾಯ ಭವನದಿಂದ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು ಪಟ್ಟಣದ ಜೇಸಿ ವೇದಿಕೆಯಲ್ಲಿ ಸಮಾವೇಶಗೊಳ್ಳಲಿದೆ. ಮಡಿಕೇರಿ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಡಿಸಿಎಫ್ ಸ್ಥಳಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಸಿ ಮತ್ತು ಡಿಯ ಸರ್ವೆ ನಂಬರ್ ಗಳನ್ನು ಮೀಸಲು ಅರಣ್ಯವಾಗಿ ಘೋಷಿಸಲು ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಸರ್ಕಾರ ಹಿಂಪಡೆಯಬೇಕು.. ಸಿ ಮತ್ತು ಡಿ ಸರ್ವೆ ನಂ ಗಳಲ್ಲಿ ಫಾರಂ 50, 53, 57ನಲ್ಲಿ ಅರ್ಜಿ ಸಲ್ಲಿಸಿರುವ ರೈತರಿಗೆ ಒಂದು ತಿಂಗಳ ಒಳಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ದಿನೇಶ್, ಸಂಚಾಲಕರಾದ ಚೇತನ್, ನತೀಶ್ ಮಂದಣ್ಣ, ಗೌಡಳ್ಳಿ ಪೃಥ್ವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.