ಸೋಮವಾರಪೇಟೆ: ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಳಗುಂದ ಗಿರಿಜನರ ಹಾಡಿಯ ಪಕ್ಕದ ಕಾಡಿನಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಬುಧವಾರ ಪತ್ತೆಯಾಗಿದೆ.
ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಸೋಮವಾರಪೇಟೆ ಠಾಣೆಯ ಇನ್‌ಸ್ಪೆಕ್ಟರ್ ರಾಮಚಂದ್ರನಾಯಕ, ಸಬ್ ಇನ್‌ಸ್ಪೆಕ್ಟರ್ ರಮೇಶ್ ಕುಮಾರ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು. ಆದರೆ, ಮೃತರ ಗುರುತು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಿದ ಬಳಿಕವಷ್ಟೆ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.