ಮಡಿಕೇರಿ: ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸಾಹಿತ್ಯ ಜೀವನದ ಹಾದಿ ಯುವ ಸಾಹಿತಿಗಳಿಗೆ ಮಾದರಿಯಾಗಿದ್ದು, ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕ ಶನಿವಾರ ಏರ್ಪಡಿಸಿದ್ದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಲೋಕಕ್ಕೆ ಎಸ್.ಎಲ್.ಭೈರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರು ಎಸ್.ಎಲ್.ಭೈರಪ್ಪ ಅವರ ಸಾಧನೆ ಹಾಗೂ ಜೀವನ ಚರಿತ್ರೆಯನ್ನು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಿವರಿಸಿದರು.
ಭೈರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಮೂರ್ನಾಡು ಹೋಬಳಿ ಘಟಕದ ಸ್ಥಾಪಕಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಪದಾಧಿಕಾರಿಗಳಾದ ವಿಘ್ನೇಶ್ ಮೂರ್ನಾಡು, ವಿ.ಎಂ.ಧನಂಜಯ, ಪುದಿಯೊಕ್ಕಡ ರಮೇಶ್, ಮಹಾಬಲೇಶ್ವರ ಭಟ್, ಮಹಿಳಾ ಪ್ರತಿನಿಧಿ ಮೀನಾಕ್ಷಿ ಕೇಶವ, ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮೀ, ಸಂಘಟನಾ ಕಾರ್ಯದರ್ಶಿಗಳಾದ ಕೊಂಪುಳಿರ ಮಮತ, ಅಬ್ದುಲ್ ಖಾದರ್, ಕೋಶಾಧಿಕಾರಿ ಮಡೆಯಂಡ ಸೂರಜ್, ಕಾರ್ಯದರ್ಶಿ ಅಪ್ಪಚಂಡ ಸುಚಿತ ಕಾವೇರಪ್ಪ, ಕವಯತ್ರಿ ರಮ್ಯ ಕೆ.ಜಿ, ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮುಖಂಡರಾದ ಎಚ್.ಕೆ.ಉಮಾವತಿ, ಮರಗೋಡು ಗಣಪತಿ ಭಜನಾ ಮಂಡಳಿಯ ಪ್ರೇಮ ಗಣೇಶ್, ಸಿ.ಜೆ.ತಾರಾದೇವಿ, ಭಾನುಪ್ರಿಯ, ಮೂರ್ನಾಡು ಸಂಜೀವಿನಿ ಒಕ್ಕೂಟದ ರಮ್ಯಾ ಎಂ.ಡಿ, ಭಾರತಿ ಬಿ.ಎಲ್, ಮೂರ್ನಾಡು ಟೈಲರ್ ಸಂಘದ ಸದಸ್ಯರಾದ ರೋಸ್ಲಿ, ಡೈಸಿ ಬಿ.ಡಿ, ಅಜರುದ್ದೀನ್ ವಿ.ಯು, ಬಿ.ಪಿ.ಶಾಂತಿ ಭಾಗವಹಿಸಿದ್ದರು.
ನ. 6ರಂದು ರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ನ.6 ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ರಾಜ್ಯೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸುವ ಕುರಿತು ಚರ್ಚಿಸಲಾಯಿತು. ಮೂರ್ನಾಡು ಹೋಬಳಿ ಘಟಕಕ್ಕೆ 6 ಗ್ರಾಮಗಳು ಸೇರಿದ್ದು ಈ ಗ್ರಾಮಗಳ ಸಂಘ ಸಂಸ್ಥೆಗಳು ಗ್ರಾಮ ಪಂಚಾಯಿತಿ ಶಾಲಾ ಕಾಲೇಜುಗಳು ಸಾಹಿತ್ಯಾಸಕ್ತರು ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ರಾಜ್ಯೋತ್ಸವವನ್ನು ಅದ್ದೂರಿ ಮತ್ತು ಯಶಸ್ವಿಯಾಗಿ ಆಚರಿಸಲು ಕೈಜೋಡಿಸಬೇಕು ಎಂದು ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಮನವಿ ಮಾಡಿದರು. ಕಸಾಪ ಸದಸ್ಯ ವಿಘ್ನೇಶ್ ಮೂರ್ನಾಡು ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ ಭಾಗವಹಿಸಿದ್ದರು.