ADVERTISEMENT

ವಿಷಪೂರಿತ ಹಾವುಗಳು: ಮುನ್ನೆಚ್ಚರಿಕೆ ತರಬೇತಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 5:18 IST
Last Updated 9 ಸೆಪ್ಟೆಂಬರ್ 2025, 5:18 IST
   

ಕುಶಾಲನಗರ: ಸಮೀಪದ ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಸೆ.11 ರಂದು ಗುರುವಾರ ವಿಷಪೂರಿತ ಹಾವುಗಳು ಮತ್ತು ಗುರುತಿಸುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಒಂದು ದಿನದ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಯಲ್ಲಿ ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆಗಳು, ಹಾವುಗಳು ಬರದಂತೆ ತಡೆಯುವುದು, ಆಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ವಿಷಯ ತಜ್ಞರಿಂದ ಮಾಹಿತಿ ನೀಡಲಿದ್ದಾರೆ.

ಆಸಕ್ತ ರೈತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್‌ ಸಂಖ್ಯೆ 88805 57766 ಅಥವಾ 99024 42243ಗೆ ಕರೆ ಮಾಡಿ ಹೆಸರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಸೀಮಿತ ಅವಕಾಶಗಳಿರುವುದರಿಂದ ಮೊದಲು ನೋಂದಾಯಿಸಿದ ಸಾರ್ವಜನಿಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.