ADVERTISEMENT

‘ಕಾಡು ಬೆಳೆಸಿ, ನಾಡು ಉಳಿಸಿ’

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 5:30 IST
Last Updated 6 ಜೂನ್ 2025, 5:30 IST
ಸೋಮವಾರಪೇಟೆ ಬಸವೇಶ್ವರ ರಸ್ತೆ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.
ಸೋಮವಾರಪೇಟೆ ಬಸವೇಶ್ವರ ರಸ್ತೆ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.   

ಸೋಮವಾರಪೇಟೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಸವೇಶ್ವರ ರಸ್ತೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನೆಡುವ ಮೂಲಕ ‘ಕಾಡು ಬೆಳೆಸಿ, ನಾಡು ಉಳಿಸಿ’ ಎಂಬ ವಾಕ್ಯದೊಂದಿಗೆ ಗುರುವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಮೊದಲ ವಾರ್ಡ್ ಸದಸ್ಯ ಮೃತ್ಯುಂಜಯ ಗಿಡ ನೆಟ್ಟು ಚಾಲನೆ ನೀಡಿದರು.  ಅಂಗನವಾಡಿ ಶಿಕ್ಷಕಿ ಜಗದಾಂಬ, ಸಹಾಯಕಿ ಸೌಮ್ಯ, ನಾವು ಪ್ರತಿಷ್ಠಾನ ಸಂಸ್ಥೆಯ ಗೌತಮ್ ಕಿರಗಂದೂರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT