ADVERTISEMENT

ಸೋಮವಾರಪೇಟೆ: ಬೆಟ್ಟದಳ್ಳಿಯಲ್ಲಿ ಅಡುಗೆ ಕೋಣೆ ನಿರ್ಮಿಸಲು ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:20 IST
Last Updated 12 ಜನವರಿ 2026, 6:20 IST
ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮದ ಸಮುದಾಯ ಭವನಕ್ಕೆ ನಿರ್ಮಿಸಲು ಉದ್ದೇಶಿಸಿರುವ ಅಡುಗೆ ಕೊಠಡಿ ಕಾಮಗಾರಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಭಾನುವಾರ ಭೂಮಿ ಪೂಜೆ ನೆರವೇರಿಸಿದರು
ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮದ ಸಮುದಾಯ ಭವನಕ್ಕೆ ನಿರ್ಮಿಸಲು ಉದ್ದೇಶಿಸಿರುವ ಅಡುಗೆ ಕೊಠಡಿ ಕಾಮಗಾರಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಭಾನುವಾರ ಭೂಮಿ ಪೂಜೆ ನೆರವೇರಿಸಿದರು   

ಸೋಮವಾರಪೇಟೆ: ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮದ ಸಮುದಾಯ ಭವನಕ್ಕೆ ನಿರ್ಮಿಸಲು ಉದ್ದೇಶಿಸಲಾಗಿರುವ ಅಡುಗೆ ಕೊಠಡಿ ಕಾಮಗಾರಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ಈ ಭಾಗದ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಬಳಕೆಯಾಗುತ್ತಿರುವ ಸಮುದಾಯ ಭವನಕ್ಕೆ ಸೂಕ್ತ ಅಡುಗೆ ಕೋಣೆ ಇಲ್ಲದೇ ಇರುವ ಬಗ್ಗೆ ಗ್ರಾಮಸ್ಥರು ಮನವಿ ಮಾಡಿಕೊಂಡ ಮೇರೆಗೆ ಸ್ಪಂದಿಸಿ, ವೈಯುಕ್ತಿಕವಾಗಿ ಕೊಠಡಿ ನಿರ್ಮಿಸಿಕೊಡುವ ಭರವಸೆ ನೀಡಿದ್ದು, ಅದರಂತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕೆ. ಈರಪ್ಪ, ಕಾರ್ಯದರ್ಶಿ ಎಚ್.ಎಂ. ಲೋಕೇಶ್, ಬೆಟ್ಟದಕೊಪ್ಪ-ಬೆಟ್ಟದಳ್ಳಿ ಗ್ರಾಮಾಧ್ಯಕ್ಷ ಎಂ.ಆರ್. ಸಂಪತ್ ಕುಮಾರ್, ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜಿ.ಎಚ್. ರಾಜೇಶ್, ಬಿ.ಆರ್. ಶಿವಕುಮಾರ್, ಪ್ರವೀಣ್ ಕುಮಾರ್, ಪರಮೇಶ್, ಬೆಟ್ಟದಳ್ಳಿ ಪೃಥ್ವಿ, ಸಂದೇಶ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.