ADVERTISEMENT

ಸೋಮವಾರಪೇಟೆ: ಬಿಜೆಪಿಯಿಂದ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 10 ಮೇ 2025, 13:48 IST
Last Updated 10 ಮೇ 2025, 13:48 IST
ಸೋಮವಾರಪೇಟೆ ಪಟ್ಟಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಉಗ್ರವಾದಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಸೇನೆಯ ಶ್ರೇಯಸ್ಸಿಗಾಗಿ ಮಂಡಲ ಬಿಜೆಪಿ ವತಿಯಿಂದ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.
ಸೋಮವಾರಪೇಟೆ ಪಟ್ಟಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಉಗ್ರವಾದಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಸೇನೆಯ ಶ್ರೇಯಸ್ಸಿಗಾಗಿ ಮಂಡಲ ಬಿಜೆಪಿ ವತಿಯಿಂದ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.   

ಸೋಮವಾರಪೇಟೆ: ಉಗ್ರವಾದಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಸೇನೆ ಶ್ರೇಯಸ್ಸಿಗಾಗಿ ಮಂಡಲ ಬಿಜೆಪಿಯಿಂದ ಪಟ್ಟಣದ ವಿದ್ಯಾಗಣಪತಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.

ಭಾರತೀಯ ಜನತಾ ಪಾರ್ಟಿ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ‘ಪೆಹಲ್ಗಾಮ್‌‌‌ನಲ್ಲಿ ನಡೆದ ಅಮಾಯಕರ ಹತ್ಯೆಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು, ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ಹುಟ್ಟಗಿಸುತ್ತಿದೆ. ನಮ್ಮ ಸೈನ್ಯ ನಮ್ಮ ಹೆಮ್ಮೆಯಾಗಿದ್ದು, ಭಾರತೀಯ ಸೇನೆಗೆ ಸದಾ ಯಶಸ್ಸು ಸಿಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ’ ಎಂದರು.

ಈ ಸಂದರ್ಭ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ, ಮಾಜೀ ಎಂಎಲ್ ಸಿ ಎಸ್.ಜಿ. ಮೇದಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತ ವಿರೂಪಾಕ್ಷ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.