ಸೋಮವಾರಪೇಟೆ: ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿಯ ಕಾವೇರಿ ಬಡಾವಣೆಯಲ್ಲಿರುವ ಸೈನಿಕ ರಸ್ತೆ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಶಾಲಾ–ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಲು ತೊಂದರೆ ಎದುರಿಸುವಂತಾಗಿದೆ. ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.