
ಪ್ರಜಾವಾಣಿ ವಾರ್ತೆ
ಸೋಮವಾರಪೇಟೆ: ಕಲ್ಕಂದೂರು ಗ್ರಾಮದ ಧನಂಜಯ ಎಂಬವರ ಕಾಫಿ ತೋಟಕ್ಕೆ ಈಚೆಗೆ ಆಕಸ್ಮಿಕ ಬೆಂಕಿ ತಗಲಿ 2 ಎಕರೆ ತೋಟ ಸುಟ್ಟುಹೋಗಿದೆ.
ತೋಟಕ್ಕೆ ಬೆಂಕಿ ತಗಲಿ ಕಾಫಿ, ಕಾಳುಮೆಣಸು ಮತ್ತು ಬಾಳೆ ಗಿಡಗಳು ಸುಟ್ಟುಹೋಗುತ್ತಿರುವುದನ್ನು ಗಮನಿಸಿದ ಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರುಅಗ್ನಿಶಾಮಕ ಠಾಣೆಗೆ ದೂರು ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಯಶಸ್ವಿಯಾದರು.
ತೋಟದ ಮಾಲೀಕರು ಬೆಂಕಿ ಬಿದ್ದು ನಷ್ಟವಾಗಿದೆ. ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.