ADVERTISEMENT

ಸೋಮವಾರಪೇಟೆ | ರೈತರು ಸಮಗ್ರ ಕೃಷಿ ಅಳವಡಿಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 5:33 IST
Last Updated 6 ಜನವರಿ 2026, 5:33 IST
ಸೋಮವಾರಪೇಟೆ ಸಮೀಪದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮದಲ್ಲಿ ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕರಾದ ಶಾರದಾ ಮಾತನಾಡಿದರು
ಸೋಮವಾರಪೇಟೆ ಸಮೀಪದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮದಲ್ಲಿ ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕರಾದ ಶಾರದಾ ಮಾತನಾಡಿದರು   

ಸೋಮವಾರಪೇಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಶ್ ಮಾತನಾಡಿ, ರೈತರು ಸಮಗ್ರ ಕೃಷಿ ಅಳವಡಿಸಿಕೊಂಡು ಕೃಷಿ ಮಾಡಿದರೆ ಮಾತ್ರ ಹೆಚ್ಚು ಲಾಭ ಗಳಿಸಬಹುದು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕರಾದ ಶಾರದಾ ಮಾತನಾಡಿ, ಪ್ರತಿಯೊಬ್ಬರು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮುಂಚೆ ಮಣ್ಣು ಪರೀಕ್ಷೆ ಮಾಡಿಸುವಂತೆ ತಿಳಿಸಿದರು.

ADVERTISEMENT

ತೋಟಗಾರಿಕೆ ಇಲಾಖೆಯಿಂದ ಮತ್ತು ಕೃಷಿ ಇಲಾಖೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಬಿ.ಬಿ.ಲಲಿತಾ ವಹಿಸಿದ್ದರು. ಕೃಷಿ ಮೇಲ್ವಿಚಾರಕ ಹರೀಶ್ ಕುಮಾರ್, ಲೇಖಕಿ ಪ್ರಿಯ, ಕೃಷಿ ಸಖಿ ಕಾವ್ಯ, ಸೌಮ್ಯ, ರೋಹಿಣಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.