ADVERTISEMENT

ಸೋಮವಾರಪೇಟೆ: ರುದ್ರಹೋಮ, ಕಲಶಾಭಿಷೇಕ, ತೀರ್ಥಸ್ನಾನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 4:16 IST
Last Updated 17 ಫೆಬ್ರುವರಿ 2026, 4:16 IST
ಸೋಮವಾರಪೇಟೆ ಸಮೀಪದ ಸಿದ್ಧಲಿಂಗಪುರದ ಅರಿಶಿನಕುಪ್ಪೆಯಲ್ಲಿ ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು
ಸೋಮವಾರಪೇಟೆ ಸಮೀಪದ ಸಿದ್ಧಲಿಂಗಪುರದ ಅರಿಶಿನಕುಪ್ಪೆಯಲ್ಲಿ ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು   

ಸೋಮವಾರಪೇಟೆ: ಸಮೀಪದ ಸಿದ್ಧಲಿಂಗಪುರದ ಅರಿಶಿನಕುಪ್ಪೆಯಲ್ಲಿ ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಸೋಮವಾರ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆ ರುದ್ರಹೋಮ, ಕಲಶಾಭಿಷೇಕ, ಕ್ಷೇತ್ರದ ಪ್ರಧಾನಗುರುಗಳಾದ ಶ್ರೀರಾಜೇಶ್ ನಾಥ್ ಅವರ ನೇತೃತ್ವದಲ್ಲಿ ಭಕ್ತಾದಿಗಳಿಗೆ ತೀರ್ಥಸ್ನಾನ ನಡೆಯಿತು.

ಮಂಜುನಾಥಸ್ವಾಮಿ ಮತ್ತು ಪರಿವಾರ ದೇವರುಗಳಿಗೆ ನೈವೇದ್ಯ ಮತ್ತು ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಿಸಲಾಯಿತು. ಪೂಜಾ ಕಾರ್ಯವನ್ನು ದೇವಾಲಯದ ಪ್ರಧಾನ ಅರ್ಚಕ ಜಗದೀಶ್ ಉಡುಪ ನೆರವೇರಿಸಿದರು.

ದೇವಾಲಯ ಜೀಣೋದ್ಧಾರ ಸಮಿತಿ ಅಧ್ಯಕ್ಷ ನಾಪಂಡ ಮುತ್ತಪ್ಪ, ಗೌರವ ಅಧ್ಯಕ್ಷ ನಾಪಂಡ ಮುದ್ದಪ್ಪ, ಕಾರ್ಯದರ್ಶಿ ಪ್ರಕಾಶ್ ರಮೇಶ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.