ADVERTISEMENT

ಸೋಮವಾರಪೇಟೆ: ವಿಷ ಸೇವಿಸಿದ್ದ ಯುವಕ ಸಾವು 

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 15:15 IST
Last Updated 5 ಜೂನ್ 2025, 15:15 IST
 ಪವನ್
 ಪವನ್   

ಸೋಮವಾರಪೇಟೆ: ತಾಲ್ಲೂಕಿನ ಶಾಂತಳ್ಳಿ ಗ್ರಾಮದ ಬಸವನಕಟ್ಟೆ ನಿವಾಸಿ ಜಯಂತಿ ಕುಶಾಲಪ್ಪ ಎಂಬವರ ಪುತ್ರ ಪವನ್ (25) ವಿಷ ಸೇವಿಸಿದ್ದ ಸ್ಥಿತಿಯಲ್ಲಿ ಮೇ 3ರಂದು ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತರಾಗಿದ್ದಾರೆ.

ಯಂತ್ರೋಪಕರಣ ದುರಸ್ತಿ ವಿಭಾಗದಲ್ಲಿ ಮೆಕ್ಯಾನಿಕ್ ಆಗಿದ್ದ ಇವರು ಮಂಗಳವಾರ ಶನಿವಾರಸಂತೆಯಲ್ಲಿರುವ ಘಟಕಕ್ಕೆ ಕೆಲಸಕ್ಕೆ ತೆರಳಿದ್ದು, ಮಧ್ಯಾಹ್ನ ಊಟದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಶನಿವಾರಸಂತೆ ಆಸ್ಪತ್ರೆಗೆ ಸಾಗಿಸಿ, ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ಸಾಗಿಸಲಾಗಿತ್ತು. ರಾತ್ರಿ ಸಾವನ್ನಪ್ಪಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.