ನಾಪೋಕ್ಲು: ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವಿಶೇಷ ಸಾಧನೆ, ಕೆಲಸ ಕಾರ್ಯಗಳ ಮಾಹಿತಿಯನ್ನು ಒಳಗೊಂಡ ಮುನ್ನೋಟ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಪಂಚಾಯತಿ ಸಭಾಂಗಣದಲ್ಲಿ ಪಂಚಾಯತಿ ಅಧ್ಯಕ್ಷ ಕುಶನ್ ರೈ ಬಿ.ಎಸ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಆಯೋಜಿಸಿದ್ದ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಾಮಾನ್ಯ ಸಭೆಯಲ್ಲಿ ಮುನ್ನೋಟ ಪುಸ್ತಕ ಅನಾವರಣಗೊಳಿಸಲಾಯಿತು.
ಸಭೆಯಲ್ಲಿ ಪಿಡಿಒ ಚಂದ್ರಮೌಳಿ ಮಾತನಾಡಿ, ಕಳೆದ 2020-21ರಿಂದ 2025-26 ವರೆಗೆ ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ಕಾರ್ಯರೂಪಕ್ಕೆ ತರಲಾಗಿದೆ. ಸದಸ್ಯರೆಲ್ಲರ ನಿಸ್ವಾರ್ಥ ಮನೋಭಾವನೆಯಿಂದ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಯಿತು ಎಂದರು.
ಕೊಡಗಿನ ಪಂಚಾಯಿತಿಗಳಲ್ಲಿ ಇದೇ ಮೊದಲ ಬಾರಿಗೆ ಪಂಚಾಯಿತಿಯ ಐದು ವರ್ಷಗಳ ಸಾಧನೆ ಕಾರ್ಯವನ್ನು ಬರವಣಿಗೆಯ ರೂಪದಲ್ಲಿ ಪಾರದರ್ಶಕವಾಗಿ ಹಾಗೂ ಎಲ್ಲಾ ಸಮುದಾಯದ ಜನರಿಗೆ ಅನುಕೂಲವಾಗುವಂತೆ ಅಕ್ಷರರೂಪದಲ್ಲಿ ಮುದ್ರಿಸಿ ಸಾರ್ವಜನಿಕರಿಗೆ ಮುಂದಿನ ಗ್ರಾಮಸಭೆಯಲ್ಲಿ ವಿತರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ರೇಖಾ ಬಾಲು ಬಿ.ಎಸ್, ಸದಸ್ಯರಾದ ಮುಂಡಂಡ ವಿಜು ತಿಮ್ಮಯ್ಯ, ಅಪ್ಪಚಂಡ ಮೀನಾಕ್ಷಿ ದೇವಯ್ಯ, ಮುಡೇರ ಶರ್ಮಿಳಾ ಮನು, ಎಂ.ಎನ್. ಪುಷ್ಪ, ಮುಂಡಂಡ ಪವಿ ಸೋಮಣ್ಣ , ನಿಂಗಪ್ಪ ಎಚ್.ಎನ್, ಬಿ.ಎಸ್. ಕೃಷ್ಣಪ್ಪ, ಯಶ್ವಿನ್ ಪೊನ್ನಪ್ಪ, ರಾಜೇಶ್ ಎಚ್.ಎಸ್, ಪಾರೆಮಜುಲು ರೀತ ಸುದರ್ಶನ್, ಮುಕ್ಕಾಟಿರ ಸೌಮ್ಯ ಸತೀಶ್ ಮತ್ತು ಲತಾ ಎಂ.ವೈ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.