ಸಾಂದರ್ಭಿಕ ಚಿತ್ರ
ಮಡಿಕೇರಿ: ಪ್ರಸಕ್ತ ಸಾಲಿನ ಮಾರ್ಚ್ -ಏಪ್ರಿಲ್‌ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರಲ್ಲಿ ಜಿಲ್ಲೆಯ 171 ಪ್ರೌಢಶಾಲೆಗಳಿಂದ 6,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 5,142 ವಿದ್ಯಾರ್ಥಿಗಳು ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗಿದ್ದು ಶೇ 82.21 ಫಲಿತಾಂಶ ದಾಖಲಾಗಿದೆ.
ಈ ಫಲಿತಾಂಶದಲ್ಲಿ 1,159 ವಿದ್ಯಾರ್ಥಿಗಳ ಫಲಿತಾಂಶ ಅಪೂರ್ಣವಾಗಿತ್ತು. ಇವರಲ್ಲಿ 1,099 ಜನ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗೆ ನೋಂದಣಿ ಆಗಿದ್ದಾರೆ. ಇನ್ನು 60 ಜನ ನೋಂದಣಿ ಆಗಬೇಕಾಗಿದೆ. ಪರೀಕ್ಷೆಗೆ ನೋಂದಣಿ ಆಗಲು ಮೇ 10 ಕೊನೆಯ ದಿನವಾಗಿದೆ. ಪರೀಕ್ಷೆಗೆ ಶುಲ್ಕ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ನೋಂದಣಿ ಮಾಡಲು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆ-2 ಮೇ 26 ರಿಂದ ಮೇ 31 ರವರೆಗೆ ನಡೆಯಲಿದೆ.
ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆಯು ಸಿ.ಸಿ.ಟಿ.ವಿ ವೆಬ್‍ಕಾಸ್ಟಿಂಗ್ ಕಣ್ಗಾವಲಿನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.