ADVERTISEMENT

ರಾಜ್ಯದಿಂದ ಹಾಕಿ ಪ್ರಾತಿನಿಧ್ಯ ಕಡಿಮೆ; ಬೇಸರ

ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 11:33 IST
Last Updated 22 ನವೆಂಬರ್ 2022, 11:33 IST
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ಮಡಿಕೇರಿಯ ಸಾಯಿ ಟರ್ಫ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಅಂತರರಾಷ್ಟ್ರೀಯ ಹಾಕಿ ಕ್ರೀಡಾಪಟುಗಳಾದ ವಿ.ಎಸ್.ವಿನಯ್, ಎಸ್.ವಿ.ಸುನಿಲ್ ಚಾಲನೆ ನೀಡಿದರು
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ಮಡಿಕೇರಿಯ ಸಾಯಿ ಟರ್ಫ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಅಂತರರಾಷ್ಟ್ರೀಯ ಹಾಕಿ ಕ್ರೀಡಾಪಟುಗಳಾದ ವಿ.ಎಸ್.ವಿನಯ್, ಎಸ್.ವಿ.ಸುನಿಲ್ ಚಾಲನೆ ನೀಡಿದರು   

ಮಡಿಕೇರಿ: ‘ಕೊಡಗು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದಿಂದ ಭಾರತೀಯ ಹಾಕಿ ತಂಡವನ್ನು ಪ್ರತಿನಿಧಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ’ ಎಂದು ಅಂತರರಾಷ್ಟ್ರೀಯ ಹಾಕಿ ಕ್ರೀಡಾಪಟು ವಿ.ಎಸ್.ವಿನಯ್ ಬೇಸರ ವ್ಯಕ್ತಪಡಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ಇಲ್ಲಿನ ಸಾಯಿ ಟರ್ಫ್ ಮೈದಾನದಲ್ಲಿ ಸೋಮವಾರ ಏರ್ಪಡಿ ಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ರಾಜ್ಯಮಟ್ಟದ ಹಾಕಿ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಹಿಂದೆ ಹಾಕಿ ಕ್ರೀಡೆಯಲ್ಲಿ ಕೊಡಗು ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದಿಂದ ಹಾಕಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳುವುದೇ ಕಡಿಮೆಯಾ ಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ ಹಾಗೂ ರಾಜ್ಯದವರು ಭಾರತವನ್ನು ಪ್ರತಿನಿಧಿಸುವಂತಾಗಬೇಕು’ ಎಂದರು.

ADVERTISEMENT

ಚಾಲನೆ ನೀಡಿ ಮಾತನಾಡಿದ ಮತ್ತೊಬ್ಬ ಅಂತರರಾಷ್ಟ್ರೀಯ ಹಾಕಿ ಆಟಗಾರ ಎಸ್.ವಿ.ಸುನಿಲ್, ‘ಕ್ರೀಡಾಪಟುಗಳು ಜಿಲ್ಲಾ, ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸುವಂತಾಗಬೇಕು’ ಎಂದು ಅವರು ಸಲಹೆ ನೀಡಿದರು.

‘ಕ್ರೀಡಾಪಟುಗಳು ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಕ್ರೀಡಾಪಟುಗಳು ಶಿಕ್ಷಣ ಮತ್ತು ಕ್ರೀಡೆ ಯಲ್ಲಿ ಸಮತೋಲನದಿಂದ ತೊಡಗಿಸಿ ಕೊಳ್ಳಬೇಕು’ ಎಂದು ಸಲಹೆ ನೀಡಿದರು.

‌ನ. 22ರಿಂದ 25ರವರೆಗೂ ಇಲ್ಲಿ ರಾಜ್ಯದ 4 ವಿಭಾಗಗಳಿಂದ ಬಂದ 12 ತಂಡಗಳೂ ಸೇರಿದಂತೆ ಒಟ್ಟು 18 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯರಾದ ಎಸ್.ಸಿ.ಸತೀಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಪಲ್ಲೇದ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀನಿವಾಸ್, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎಸ್‍ಡಿಎಂಸಿ ಅಧ್ಯಕ್ಷರಾದ ಚಂದ್ರಶೇಖರ್, ಉಪ ಪ್ರಾಂಶುಪಾಲರಾದ ಪಿ.ಕೆ.ನಳಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.