ಶನಿವಾರಸಂತೆ: ಇತ್ತೀಚೆಗೆ ಅರವತೋಕ್ಲು ಗ್ರಾಮದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿನಿ ಎ.ವಿ.ಸಮನ್ವಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಈ ಮೂಲಕ ಅ. 7 ರಂದು ಹಾವೇರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಈಕೆ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ.
ಸಮನ್ವಿ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ ಗ್ರಾಮದ ವೇಣು ಮತ್ತು ವನಿತಾ ದಂಪತಿ ಪುತ್ರಿ ಎಂದು ಕಾವೇರಿ ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.