ADVERTISEMENT

ರಾಜ್ಯಮಟ್ಟದ ಕಾರ್ಯಾಗಾರ: 13 ಜಿಲ್ಲೆಗಳ ಪ್ರತಿನಿಧಿಗಳು ಭಾಗಿ

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದಿಂದ ಆಯೋಜನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 7:17 IST
Last Updated 29 ಜನವರಿ 2026, 7:17 IST
ಕರ್ನಾಟಕ ರಾಜ್ಯ ಸಹಕಾರ ‍ಪಟ್ಟಣ ಬ್ಯಾಂಕುಗಳ ಮಹಾಮಂಡಳದ ರಾಜ್ಯ ನಿರ್ದೇಶಕ ಎಂ.ಆರ್. ವೆಂಕಟೇಶ್ ಅವರು ಮಡಿಕೇರಿಯಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು
ಕರ್ನಾಟಕ ರಾಜ್ಯ ಸಹಕಾರ ‍ಪಟ್ಟಣ ಬ್ಯಾಂಕುಗಳ ಮಹಾಮಂಡಳದ ರಾಜ್ಯ ನಿರ್ದೇಶಕ ಎಂ.ಆರ್. ವೆಂಕಟೇಶ್ ಅವರು ಮಡಿಕೇರಿಯಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು   

ಮಡಿಕೇರಿ: ಕಾಲಕಾಲಕ್ಕೆ ನಡೆಯುವ ಕಾರ್ಯಾಗಾರಗಳಲ್ಲಿ ಭಾಗಿಯಾಗಿ ಅದರ ಸದುಪಯೋಗಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ‍ಪಟ್ಟಣ ಬ್ಯಾಂಕುಗಳ ಮಹಾಮಂಡಳದ ರಾಜ್ಯ ನಿರ್ದೇಶಕ ಎಂ.ಆರ್.ವೆಂಕಟೇಶ್ ತಿಳಿಸಿದರು.

ಇಲ್ಲಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಸಹಕಾರ ‍ಪಟ್ಟಣ ಬ್ಯಾಂಕುಗಳ ಮಹಾಮಂಡಳದ ವತಿಯಿಂದ ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ನಿರ್ದೇಶಕರಿಗೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗಾಗಿ ನಡೆದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ಮಹಾಮಂಡಳವು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ವರ್ಷಪೂರ್ತಿ ಆಯೋಜಿಸುವ ಕಾರ್ಯಾಗಾರಗಳಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗಿಯಾಗಬೇಕು. ಮಾತ್ರವಲ್ಲ, ಅದರ ಸದುಪಯೋಗ ಪಡೆಯಬೇಕು’ ಎಂದು ಹೇಳಿದರು.

ADVERTISEMENT

‘ಬ್ಯಾಂಕುಗಳ ಕಾರ್ಯನಿರ್ವಹಣೆಯಲ್ಲಿ ತಂತ್ರಜ್ಞಾನ ಅಳವಡಿಕೆ, ಇತ್ತೀಚಿನ ನೀತಿ ನಿಯಮಗಳ ತಿದ್ದುಪಡಿಗಳು, ಆರ್‌ಬಿಐ ಹೊರಡಿಸುವ ಸುತ್ತೋಲೆಗಳು ಸೇರಿದಂತೆ ಇನ್ನೂ  ಅನೇಕ ವಿಚಾರಗಳನ್ನು ಅರಿಯುವು ಕುರಿತು ಈ ಕಾರ್ಯಾಗಾರದಲ್ಲಿ ತಿಳಿದುಕೊಳ್ಳಬಹುದು’ ಎಂದರು.

‘ಈ ಕಾರ್ಯಾಗಾರಲ್ಲಿ ಚರ್ಚಿತವಾಗುವ ವಿಷಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಂಡಿದ್ದೇ ಆದಲ್ಲಿ ಬ್ಯಾಂಕ್‌ನ ಕಾರ್ಯಕ್ಷಮತೆ ಹೆಚ್ಚಿಸಬಹುದು, ಬ್ಯಾಂಕುಗಳು ಹೆಚ್ಚಿನ ಲಾಭ ಗಳಿಸಬಹುದು ಹಾಗೂ ಪಾರದರ್ಶಕ ಆಡಳಿತಕ್ಕೂ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ನಂತರ, ಸಹಕಾರ ಸಂಘಗಳ ನಿವೃತ್ತ ಹೆಚ್ಚುವರಿ ರಿಜಿಸ್ಟ್ರಾರ್ ಎಚ್.ಎಸ್.ನಾಗರಾಜಯ್ಯ ಅವರು ಕೆಸಿಎಸ್‌ ಕಾಯ್ದೆ ಮತ್ತು ಇತ್ತೀಚಿನ ತಿದ್ದುಪಡಿಗಳು ಕುರಿತು ಹಾಗೂ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಆಡಳಿತ ಮಂಡಳಿ ನಿರ್ದೇಶಕರ ಪಾತ್ರ ಕುರಿತು ಮಾತನಾಡಿದರು.

ಬ್ಯಾಂಕಿಂಗ್ ತಜ್ಞ ಎಸ್.ಜಿ.ಕುಲಕರ್ಣಿ ಅವರು ಆರ್‌ಬಿಐನ ಇತ್ತೀಚಿನ ಮಾರ್ಗದರ್ಶಿ ಸೂತ್ರಗಳು, ಎನ್‌ಪಿಸಿಐ ಮತ್ತು ಇತರ ವಿಷಯಗಳಲ್ಲಿ ತಂತ್ರಜ್ಞಾನದ ಅಳವಡಿಕೆ ಕುರಿತು ಮಾತನಾಡಿದರು.

13 ಜಿಲ್ಲೆಗಳ ಪಟ್ಟಣ ಸಹಕಾರ ಬ್ಯಾಂಕುಗಳಿಂದ ಭಾಗಿಯಾಗಿದ್ದರು. ಮಹಾಮಂಡಳದ ನಿರ್ದೇಶಕರಾದ ಎಸ್‌ಬಿಎಂ ಮಂಜು, ಮಲ್ಲಮ್ಮ, ಎಚ್.ಜಯಪ್ರಕಾಶ್, ಪುಂಡಲೀಕ ಕೆದ್ಲಾಯ, ಅಶೋಕ್ ಪಟ್ಟಣಶೆಟ್ಟಿ ಭಾಗಹಿಸಿದ್ದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸಭಿಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.