ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅರಣ್ಯ ಸಂಪತ್ತು ರಕ್ಷಿಸುವ ಕುರಿತು ಬೀದಿ ನಾಟಕ ಕಾರ್ಯಕ್ರಮ ಮಾಡಲಾಯಿತು.
ವಿದ್ಯಾಸಾಗರ ಕಲಾವೇದಿಕೆ ಕಲಾವಿದರು ಗುಡ್ಡೆಹೊಸೂರು ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಟಕ ಪ್ರಸ್ತುತ ಪಡಿಸಿ ವೃಕ್ಷ ಸಂಪತ್ತನ್ನು ಹೆಚ್ಚಿಸುವ ಸಲುವಾಗಿ ಹೆಚ್ಚು ಗಿಡಗಳನ್ನು ನೆಡುವ ಬಗ್ಗೆ ಹಾಗೂ ಮರಗಳನ್ನು ಕಡಿಯದಂತೆ, ಕಾಡಿನ ಆಸುಪಾಸಿನಲ್ಲಿ ಕಾಡ್ಗಿಚ್ಚು ಹರಡದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಹರೀಶ್, ಗುಡ್ಡೆಹೊಸೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಮೇಶ್, ಕೊಡಗು ವಿದ್ಯಾಸಾಗರ ಕಲಾವೇದಿಕೆ ಮುಖ್ಯಸ್ಥ ಇ.ರಾಜು ಹಾಗೂ ಕಲಾವಿದರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.