ADVERTISEMENT

ಪ್ರಜ್ವಲ್ ಬಂಧಿಸುವಂತೆ ಹೋರಾಟ: ಬೆಂಬಲ ಸಿಪಿಐಎಂ ಬೆಂಬಲ

​ಪ್ರಜಾವಾಣಿ ವಾರ್ತೆ
Published 29 ಮೇ 2024, 15:50 IST
Last Updated 29 ಮೇ 2024, 15:50 IST

ಸಿದ್ದಾಪುರ: ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಒತ್ತಾಯಿಸಿ ಹಾಸನದಲ್ಲಿ ಮೇ.30ರಂದು ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ಪಕ್ಷದ ಬೆಂಬಲ ಇದೆ ಎಂದು ಸಿಪಿಐಎಂ ಪಕ್ಷದ ಮುಖಂಡ ಎಚ್.ಬಿ ರಮೇಶ್ ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಬಂಧಿಸಬೇಕೆಂದು ಪಕ್ಷವು ಒತ್ತಾಯಿಸುತ್ತಿದೆ. ವಿದೇಶದಲ್ಲಿ ಅಡಗಿರುವ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಹಾಸನದಲ್ಲಿ ನಡೆಯುವ ಹೋರಾಟದಲ್ಲಿ ಪಕ್ಷದ ಜಿಲ್ಲೆಯ ಕಾರ್ಯಕರ್ತರು ಭಾಗವಹಿಸುವರು ಅವರು ತಿಳಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಚ್.ಆರ್. ಶಿವಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT