ADVERTISEMENT

ಸೋಮವಾರಪೇಟೆ: ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 5:30 IST
Last Updated 2 ಡಿಸೆಂಬರ್ 2025, 5:30 IST
ಸೋಮವಾರಪೇಟೆ ಸಮೀಪದ ಚೌಡ್ಲು ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು
ಸೋಮವಾರಪೇಟೆ ಸಮೀಪದ ಚೌಡ್ಲು ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು   

ಸೋಮವಾರಪೇಟೆ: ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ ಕಾಲೇಜು ವಿಭಾಗದ ವಿದ್ಯಾರ್ಥಿಗಳು ಚನ್ನಬಸಪ್ಪ ಸಭಾಂಗಣದ ವರೆಗಿನ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಸ್ವಚ್ಛತಾ ಕಾರ್ಯ ಕೈಗೊಂಡು ಪರಿಸರ ಸಂರಕ್ಷಣೆ ಸಂದೇಶ ನೀಡಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ‘ಯುವ ಸಮುದಾಯ ಸ್ವಯಂಪ್ರೇರಿತವಾಗಿ ಪರಿಸರ ರಕ್ಷಣೆ ಹೊಣೆ ಹೊತ್ತರೆ ನಮ್ಮ ಕೊಡಗು ನಿಜವಾದ ಅರ್ಥದಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಆಗಲಿದೆ’ ಎಂದು ಹೇಳಿದರು.

ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚಕ್ರವರ್ತಿ ಸುರೇಶ್ ಮಾತನಾಡಿ, ‘ಜ್ಯೂನಿಯರ್ ಕಾಲೇಜಿನ ಮುಂದಿನ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವವರಿಗೆ ತಕ್ಕ ಶಿಕ್ಷೆಯಾಗಬೇಕು. ವಿದ್ಯಾರ್ಥಿಗಳು ನಡೆದಾಡುವ ರಸ್ತೆಯಲ್ಲೇ ಕೋಳಿ ತ್ಯಾಜ್ಯವನ್ನು ಎಸೆಯುತ್ತಿದ್ದಾರೆ. ಅಂಥವರಿಗೆ ಶಿಕ್ಷೆಯಾಗಬೇಕು. ಕಸ ಸಂಗ್ರಹ ಸ್ಥಳಗಳಲ್ಲಿ ಬೀದಿ ನಾಯಿಗಳು ಇರುತ್ತವೆ. ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದರೆ ಯಾರು ಜವಾಬ್ದಾರರು?. ದನಕರುಗಳು ಕೂಡ ಪ್ಲಾಸ್ಟಿಕ್ ವಸ್ತುಗಳನ್ನು ತಿನ್ನುತ್ತವೆ. ಇದಕ್ಕೆಲ್ಲಾ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ತನ್ಮಯಿ ಪ್ರವೀಣ್, ಐಎಸ್ಒ ನಂದಿನಿ ಗೋಪಾಲ್, ಕಾಲೇಜು ಆಡಳಿತ ಮಂಡಳಿ ನಿರ್ದೇಶಕ ನಂದಕುಮಾರ್, ಕಾಲೇಜು ಪ್ರಾಂಶುಪಾಲ ಮಿಲ್ಡ್ರೆಡ್ ಗೊನ್ಸಾಲ್ವೆಸ್ ಇದ್ದರು. ಇನ್ನರ್ ವ್ಹೀಲ್ ಕ್ಲಬ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಕಾಲೇಜಿಗೆ ಕಸ ಸಂಗ್ರಹದ ಕಬ್ಬಿಣದ ತೊಟ್ಟಿಯನ್ನು ವಿದ್ಯಾಸಂಸ್ಥೆಗೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.