ADVERTISEMENT

ಕುಶಾಲನಗರ: ವಿದ್ಯಾರ್ಥಿ ಗುಂಪಿನ ನಡುವೆ ಗಲಾಟೆ, ಒಬ್ಬ ವಿದ್ಯಾರ್ಥಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 12:59 IST
Last Updated 8 ಫೆಬ್ರುವರಿ 2022, 12:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕುಶಾಲನಗರ (ಕೊಡಗು): ಪಟ್ಟಣದ ಹಾರಂಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿ ಬೈಲುಕುಪ್ಪೆಯ ಸಂದೀಪ್ ಅವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ಧಾರೆ.

ಗಲಾಟೆ ವೇಳೆ ಚಾಕುವಿನಿಂದ ಸಂದೀಪ್ ‌ಮೇಲೆ‌ ಹಲ್ಲೆ ಮಾಡಿದ್ದ ಪ್ರಥಮ ವರ್ಷದ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಾದ ಧನುಷ್ ಹಾಗೂ ವಿಕ್ರಮ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ಧಾರೆ.

ADVERTISEMENT

ಮಂಗಳವಾರ ಪಟ್ಟಣದ ವಿವಿಧ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಕಾಲೇಜುಗಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ನಂತರ, ಎಲ್ಲ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿ ಕಾಲೇಜಿಗೆ ವಾಪಸ್ಸಾಗಿದ್ದರು. ನಂತರ, ಕಾಲೇಜು ಬಳಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ವಿಷಯಕ್ಕೆ ಮಾತಿನ‌ ಚಕಮಕಿ ನಡೆದು ಹಲ್ಲೆ ನಡೆಸಲಾಗಿದೆ.

ಚಾಕಿವಿನಿಂದ ಇರಿದು ಬಳಿಕ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಿದ್ದು ಧನುಷ್ ಹಾಗೂ ವಿಕ್ರಂ ಸಹ ಗಾಯಗೊಂಡಿದ್ದಾರೆ.

ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.