ADVERTISEMENT

ಭಗಂಡೇಶ್ವರ ದೇಗುದಲ್ಲಿ ಧಾರ್ಮಿಕ ಕೈಂಕರ್ಯ: ಪತ್ತಾಯಕ್ಕೆ ಅಕ್ಕಿ, ಬೆಳಗಿದ ನಂದಾದೀಪ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 4:15 IST
Last Updated 15 ಅಕ್ಟೋಬರ್ 2025, 4:15 IST
ಭಾಗಮಂಡಲದ  ಭಗ೦ಡೇಶ್ವರ ದೇವಾಲಯದಲ್ಲಿ ಅಕ್ಷಯ ಪಾತ್ರೆಗೆ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ  ಅಕ್ಕಿಯನ್ನು ಸುರಿದು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಭಾಗಮಂಡಲದ  ಭಗ೦ಡೇಶ್ವರ ದೇವಾಲಯದಲ್ಲಿ ಅಕ್ಷಯ ಪಾತ್ರೆಗೆ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ  ಅಕ್ಕಿಯನ್ನು ಸುರಿದು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.   

ನಾಪೋಕ್ಲು: ತಲಕಾವೇರಿ ಜಾತ್ರೆಗೆ ಸಂಬಂಧಿಸಿದಂತೆ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಯಾವುದೇ ವಿಘ್ನ ಬಾರದಿರಲಿ ಎಂದು ಪ್ರಾರ್ಥಿಸಿ, ಇಲ್ಲಿನ ಭಗ೦ಡೇಶ್ವರ ದೇವಾಲಯದಲ್ಲಿ ಮಂಗಳವಾರ ನಂದಾ ದೀಪವನ್ನು ಉರಿಸಲಾಯಿತು.

ಸೆ. 26ರಿಂದ ಆರಂಭಗೊಂಡ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಜ್ಞಾ ಮುಹೂರ್ತ, ಪತ್ತಾಯಕ್ಕೆ ಅಕ್ಕಿ ಹಾಕುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದ್ದು, ಅಕ್ಷಯಪಾತ್ರೆಗೆ ಅಕ್ಕಿ ಹಾಕುವ ಕಾರ್ಯಕ್ರಮ ಜರುಗಿತು.

ಅರ್ಚಕ ರವಿ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಜರುಗಿದ ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಹಾಗೂ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ನಂದಾದೀಪವನ್ನು ಬೆಳಗಿದರು. ಬೆಳಿಗ್ಗೆ 11:45 ಕ್ಕೆ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆಗೆ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ ಅಕ್ಷಯ ಪಾತ್ರೆಗೆ ಅಕ್ಕಿಯನ್ನು ಸುರಿದು ಚಾಲನೆ ನೀಡಿದರು.

ADVERTISEMENT

ಮಂಗಳವಾರದಿಂದ ಒಂದು ತಿಂಗಳ ಕಾಲ ಕಿರು ಸಂಕ್ರಮಣದವರೆಗೆ ನಂದಾದೀಪ ತುಪ್ಪದಿಂದ ಬೆಳಗಲಿದೆ. ತುಲಾ ಮಾಸದಲ್ಲಿ ಜಾತ್ರೆಗೆ ಯಾವುದೇ ವಿಘ್ನ ಬಾರದಿರಲಿ ಎಂಬ ನಂಬಿಕೆಯಿಂದ ನಂದಾ ದೀಪವನ್ನು ಬೆಳಗಲಾಗುತ್ತಿದೆ. ಬಳಿಕ, ಮಹಿಳೆಯರು ಭಕ್ತರು ಪಡಿಯಕ್ಕಿಯನ್ನು ಮನೆಗಳಿಗೆ ಕೊಂಡೊಯ್ದರು.

ಭಾಗಮಂಡಲದಲ್ಲಿ ಮಂಗಳವಾರ ಅಕ್ಷಯ ಪಾತ್ರೆಯಿಂದ .ಪಡಿಯಕ್ಕಿ ರೂಪದಲ್ಲಿ ಭಕ್ತರು ಅಕ್ಕಿಯನ್ನು ಸ್ವೀಕರಿಸಿದರು.

ಅಕ್ಷಯಪಾತ್ರೆಯಲ್ಲಿನ ಅಕ್ಕಿಯನ್ನು ಪಡಿಯಕ್ಕಿ ರೂಪದಲ್ಲಿ ಒಂದು ತಿಂಗಳ ಕಾಲ ಭಕ್ತರಿಗೆ ವಿತರಿಸಲಾಗುತ್ತದೆ. ಅಕ್ಷಯಪಾತ್ರೆಯಿಂದ ಕೊಂಡೊಯ್ದ ಅಕ್ಕಿಯಿಂದ ಸಂಪತ್ತು ವೃದ್ದಿಸಲಿದೆ ಎಂಬ ನಂಬಿಕೆ ಭಕ್ತರದ್ದು.

ಸಂಜೆ 4:45 ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇರಿಸಲಾಯಿತು. ಸಾಂಪ್ರದಾಯಿಕ ಆಚರಣೆಯಲ್ಲಿ ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ತಕ್ಕರಾದ ಕೋಡಿ ಮೋಟಯ್ಯ, ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಕಾರ್ಯದರ್ಶಿ ಪೇರಿಯನ ಉದಯ ಅಕಾಡೆಮಿ ಸದಸ್ಯರಾದ ಕುದುಪಜೆ ಪ್ರಕಾಶ್, ಪಟ್ಟ ಮಾಡ ಗಿರಿ, ಮಣವಟ್ಟಿರ ಪಾಪು, ಅಪಾಡಂಡ ಕೌಂಡಿನ್ಯ, ಬಡ್ಡಿರ ನಂದ, ದೇವಂಗೋಡಿ ಹರ್ಷ, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್ ಸ್ಥಳೀಯ ಬಳ್ಳಡ್ಕ ಕುಟುಂಬಸ್ಥರು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.

ಭಾಗಮಂಡಲದ  ಭಗ೦ಡೇಶ್ವರ ದೇವಾಲಯದಲ್ಲಿ ಮಂಗಳವಾರ ನಂದಾ ದೀಪವನ್ನು ಉರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.