ADVERTISEMENT

ಕೊಡಗು | ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ: ಕಲೋತ್ಸವದಲ್ಲಿ ವಿದ್ಯಾರ್ಥಿಗಳ ಕಲರವ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2024, 2:55 IST
Last Updated 7 ಡಿಸೆಂಬರ್ 2024, 2:55 IST
ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಭಾಗವಹಿಸಿದ್ದರು
ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಭಾಗವಹಿಸಿದ್ದರು   

ಮಡಿಕೇರಿ: ಕೊಡಗು ಜಿಲ್ಲೆಯ 80ಕ್ಕೂ ಅಧಿಕ ಶಾಲೆಗಳ 135ಕ್ಕೂ ಅಧಿಕ ವಿದ್ಯಾರ್ಥಿಗಳು 48 ವಿವಿಧ ಬಗೆಯ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಇಲ್ಲಿನ ಸಂತ ಮೈಕಲರ ಶಾಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಕೊಡಗು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಕಂಡು ಶಿಕ್ಷಕರು, ಪೋಷಕರು ಅವಕ್ಕಾದರು.

5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ 22 ವೈಯಕ್ತಿಕ ಸ್ಪರ್ಧೆಗಳು, 8ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ 23 ವೈಯಕ್ತಿಕ ಸ್ಪರ್ಧೆಗಳು ಹಾಗೂ 3 ಸಾಮೂಹಿಕ ಸ್ಪರ್ಧೆಗಳು ಸೇರಿ ಒಟ್ಟು 48 ಸ್ಪರ್ಧೆಗಳು ಇಲ್ಲಿ ಇಡೀ ದಿನ ನಡೆದವು.

ADVERTISEMENT

ಭಾಷಣ ಸ್ಪರ್ಧೆ, ಜನಪದ ಗೀತೆ, ಭಾವಗೀತೆ, ಭರತನಾಟ್ಯ, ಪ್ರಬಂಧ ರಚನೆ, ಚಿತ್ರಕಲೆ, ಮಿಮಿಕ್ರಿ, ಚರ್ಚಾ ಸ್ಪರ್ಧೆ, ರಂಗೋಲಿ, ಗಝಲ್, ಕವನ, ಪದ್ಯವಾಚನ, ಆಶುಭಾಷಣ ಸ್ಪರ್ಧೆ, ಹೀಗೆ ವಿವಿಧ ಬಗೆಯ ಕಲಾಪ್ರಕಾರಗಳಲ್ಲಿ ಭಾಗವಹಿಸಿ ತಮ್ಮ ಕಲಾನೈಪುಣ್ಯತೆ ಮೆರೆದರು.

ಒಬ್ಬ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗಿಂತಲೂ ಮಿಗಿಲು ಎಂಬಂತೆ ಪರಸ್ಪರ ಸ್ಪರ್ಧಾ ಮನೋಭಾವ ಮೆರೆದರು. ಮೊದಲ ಸ್ಥಾನ ಪಡೆದ 8ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಸೌಮ್ಯಾ ಪೊನ್ನಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಬಿಂದು, ಡಾ.ಸದಾಶಿವ ಪಲ್ಲೇದ್, ಪಿ.ಎ.ಪ್ರವೀಣ್, ಎ.ಸೋಮಯ್ಯ, ಬಿ.ಟಿ.ಪೂರ್ಣೇಶ್, ಮೋಹನ್ ಪೆರಾಜೆ, ಪಿ.ಎಂ.ಕಿರಣ್, ಕೆ.ಜಿ.ಅಶೋಕ್ ಭಾಗವಹಿಸಿದ್ದರು.

ಸೃಜನಶೀಲತೆ, ಕ್ರಿಯಾಶೀಲತೆ ಬೆಳೆಸಿಕೊಳ್ಳಲು ಐಶ್ವರ್ಯ ಕರೆ: ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಆಟೋಟವು ಸಹ ಇರಬೇಕು. ಆದರೆ ಮೊಬೈಲ್ ಫೋನ್ ನೋಡುವ ಗೀಳು ಇರಬಾರದು ಎಂದು ಸಲಹೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಪ್ಪ ಮಾತನಾಡಿ, ‘ಪ್ರತಿಯೊಬ್ಬರ ಬದುಕಿನಲ್ಲಿ ಸಂತಸ, ನೆಮ್ಮದಿ ಇರಲು ಓದಿನ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಪ್ರಾಣಿ, ಪಕ್ಷಿ, ಗಿಡ, ಮರ, ಹಸಿರು ನೋಡಿದರೆ ಒಂದು ರೀತಿ ಉಲ್ಲಾಸ ಉಂಟಾಗುತ್ತದೆ. ಇದರಿಂದ ಸಕಾರಾತ್ಮಕವಾಗಿ ಯೋಚಿಸಲು ಸಹಕಾರಿಯಾಗಲಿದೆ’ ಎಂದರು.

ಸಂತ ಮೈಕಲರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾದರ್ ಸಂಜಯ್ ಕುಮಾರ್ ಮಾತನಾಡಿ ‘ಪ್ರತಿಯೊಬ್ಬರಲ್ಲಿಯೂ ಹುಟ್ಟುವಾಗ ಉಸಿರು ಇರುತ್ತದೆ, ಸಾಯುವಾಗ ಹೆಸರು ಇರುತ್ತದೆ. ಆದ್ದರಿಂದ ಉಸಿರು ಮತ್ತು ಹೆಸರಿನ ನಡುವೆ ಕೆಸರು ಎರಚದೆ, ಸಮಾಜದಲ್ಲಿ ಉತ್ತಮ ಬದುಕು ನಡೆಸುವತ್ತ ಚಿಂತಿಸಬೇಕು’ ಎಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ ಮಾತನಾಡಿ, ‘ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಆದ್ದರಿಂದ ನಿರಂತರ ಸ್ಪರ್ಧೆಯಿಂದ ಒಂದಲ್ಲ ಒಂದು ದಿನ ಯಶಸ್ಸು ಪಡೆಯಬಹುದು. ಆ ನಿಟ್ಟಿನಲ್ಲಿ ಯೋಚಿಸಬೇಕು’ ಎಂದು ಸಲಹೆ ನೀಡಿದರು.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಭಾಗವಹಿಸಿದ್ದ ಶಿಕ್ಷಕರು ಪೋಷಕರು
ಇಡೀ ದಿನ ನಡೆದ ವಿವಿಧ ಸ್ಪರ್ಧೆಗಳು ನೂರಾರು ವಿದ್ಯಾರ್ಥಿಗಳು ಭಾಗಿ ವಿದ್ಯಾರ್ಥಿಗಳ ಪ್ರತಿಭೆಗೆ ಚಪ್ಪಾಳೆ ತಟ್ಟಿದ ಶಿಕ್ಷಕರು
ಸೃಜನಶೀಲತೆ ಕ್ರಿಯಾಶೀಲತೆ ಬೆಳೆಸಿಕೊಳ್ಳಲು ಐಶ್ವರ್ಯ ಕರೆ
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಲೆ ಸಾಹಿತ್ಯ ಸಂಗೀತ ನೃತ್ಯ ನಾಟಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಆಟೋಟವು ಸಹ ಇರಬೇಕು. ಆದರೆ ಮೊಬೈಲ್ ಫೋನ್ ನೋಡುವ ಗೀಳು ಇರಬಾರದು ಎಂದು ಸಲಹೆ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಪ್ಪ ಮಾತನಾಡಿ ‘ಪ್ರತಿಯೊಬ್ಬರ ಬದುಕಿನಲ್ಲಿ ಸಂತಸ ನೆಮ್ಮದಿ ಇರಲು ಓದಿನ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಪ್ರಾಣಿ ಪಕ್ಷಿ ಗಿಡ ಮರ ಹಸಿರು ನೋಡಿದರೆ ಒಂದು ರೀತಿ ಉಲ್ಲಾಸ ಉಂಟಾಗುತ್ತದೆ. ಇದರಿಂದ ಸಕಾರಾತ್ಮಕವಾಗಿ ಯೋಚಿಸಲು ಸಹಕಾರಿಯಾಗಲಿದೆ’ ಎಂದರು. ಸಂತ ಮೈಕಲರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾದರ್ ಸಂಜಯ್ ಕುಮಾರ್ ಮಾತನಾಡಿ ‘ಪ್ರತಿಯೊಬ್ಬರಲ್ಲಿಯೂ ಹುಟ್ಟುವಾಗ ಉಸಿರು ಇರುತ್ತದೆ ಸಾಯುವಾಗ ಹೆಸರು ಇರುತ್ತದೆ. ಆದ್ದರಿಂದ ಉಸಿರು ಮತ್ತು ಹೆಸರಿನ ನಡುವೆ ಕೆಸರು ಎರಚದೆ ಸಮಾಜದಲ್ಲಿ ಉತ್ತಮ ಬದುಕು ನಡೆಸುವತ್ತ ಚಿಂತಿಸಬೇಕು’ ಎಂದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ ಮಾತನಾಡಿ ‘ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಆದ್ದರಿಂದ ನಿರಂತರ ಸ್ಪರ್ಧೆಯಿಂದ ಒಂದಲ್ಲ ಒಂದು ದಿನ ಯಶಸ್ಸು ಪಡೆಯಬಹುದು. ಆ ನಿಟ್ಟಿನಲ್ಲಿ ಯೋಚಿಸಬೇಕು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.