ADVERTISEMENT

ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಅಧಿಕಾರಿ ಸಾವು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 7:34 IST
Last Updated 7 ಸೆಪ್ಟೆಂಬರ್ 2025, 7:34 IST
ಮನಮೋಹನ್‌ ರಾಯ್
ಮನಮೋಹನ್‌ ರಾಯ್   

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕು ಪ್ರಭಾರ ಯೋಜನಾಧಿಕಾರಿ ಮನಮೋಹನ ರಾಯ್ (47) ಅವರು ಶುಕ್ರವಾರ ತಮ್ಮ ಕಾರಿನಲ್ಲೇ ಮೃತಪಟ್ಟಿದ್ದಾರೆ.

‘ತಿತಿಮತಿ ಗ್ರಾಮದಲ್ಲಿ ವಾಸವಿದ್ದ ಇವರು ತಮ್ಮ ಕಾರನ್ನು ಸರ್ವೀಸ್‌ ಮಾಡಿಸಲೆಂದು ಪಿರಿಯಾಪಟ್ಟಣಕ್ಕೆ ತೆರಳಿದ್ದರು. ನಂತರ ವಾಪಸ್ ಬರುವಾಗ ಪಿರಿಯಾಪಟ್ಟಣ ಸಮೀಪದ ಬೂದಿತಿಟ್ಟು ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿದ್ದಾರೆ. ಕುಳಿತ ಸ್ಥಿತಿಯಲ್ಲೇ ಅವರು ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅನ್ನಿಸುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಇವರು ಮಾಯಾಮುಡಿ, ಸಿದ್ದಾಪುರ, ತಿತಿಮಿತಿ, ನಿಟ್ಟೂರು, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಆ. 18ರಂದು ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ’ ಎಂದು ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಅಪ್ಪಣ್ಣ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.