ಮಡಿಕೇರಿ: ತೌಕ್ತೆ ಚಂಡಮಾರುತದ ಪರಿಣಾಮ ಕೊಡಗು ಜಿಲ್ಲೆಯಲ್ಲಿ, ಶುಕ್ರವಾರ ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ. ಗಾಳಿಯ ಅಬ್ಬರ ಜೋರಾಗಿದೆ.
ಮಡಿಕೇರಿ, ಗೋಣಿಕೊಪ್ಪಲು, ಸಿದ್ದಾಪುಎಲರ, ಪೊನ್ನಂಪೇಟೆ, ವಿರಾಜಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಭಾಗದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿತ್ತು.
ಇದನ್ನೂ ಓದಿ:ಮಂಗಳೂರು: ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ
ಈಗ, ಚಂಡಮಾರುತದ ಪರಿಣಾಮ ಜೋರು ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿ ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನಮಟ್ಟ ಸ್ವಲ್ಪ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.