ADVERTISEMENT

ಸೋಮವಾರಪೇಟೆ| ವಿವಿಧ ಬೇಡಿಕೆ ಈಡೇರಿಸಲು ಸಚಿವ ಮಧು ಬಂಗಾರಪ್ಪಗೆ ಶಿಕ್ಷಕರ ಸಂಘ ಮನವಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 3:16 IST
Last Updated 10 ನವೆಂಬರ್ 2025, 3:16 IST
<div class="paragraphs"><p>ಸೋಮವಾರಪೇಟೆ ಶಾಸಕರ ಕಚೇರಿಯಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು&nbsp;&nbsp;</p></div>

ಸೋಮವಾರಪೇಟೆ ಶಾಸಕರ ಕಚೇರಿಯಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು  

   

ಸೋಮವಾರಪೇಟೆ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳು ಶನಿವಾರ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರನ್ನು ಶಾಸಕರಾದ ಡಾ. ಮಂತರ್ ಗೌಡ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಕೊಡಗು ಜಿಲ್ಲೆಯಲ್ಲಿ ಸಂಖ್ಯೆ ಮಿತಿಯ ನಿಯಮದಿಂದ ಅನುದಾನಿತ ಶಾಲೆಗಳು ಮುಚ್ಚುತ್ತಿವೆ. ಹೀಗಾಗಿ, ಸಂಖ್ಯೆಯ ಮಿತಿಯ ನಿಯಮವನ್ನು ರದ್ದುಪಡಿಸಬೇಕು ಎಂದು ಕೋರಿದರು.

ADVERTISEMENT

ಸಚಿವ ಮಧು ಬಂಗಾರಪ್ಪ ಮಾತನಾಡಿ, ಮುಚ್ಚಿದ ಶಾಲೆಗಳ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸುವ ಭರವಸೆ ನೀಡಿದರು.

ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಮುಂಬಡ್ತಿಯನ್ನು ಶೀಘ್ರವಾಗಿ ನೀಡಬೇಕು. ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಯಿಂದ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಬೇಕು. ಅನುದಾನಿತ ಶಾಲಾ ಶಿಕ್ಷಕರಿಗೂ ಅರೋಗ್ಯ ಸಂಜೀವಿನಿ ನೀಡಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿದರು.

ಕೆಲವೇ ದಿನಗಳಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ನೀಡುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

ಸಿಬಿಎಸ್‌ಸಿ ಮತ್ತು ಐ‌ಸಿಎಸ್‌ಸಿ ಮಾದರಿಯಲ್ಲಿ ಉತ್ತೀರ್ಣತೆಯ ಮಾನದಂಡವನ್ನು ಆಂತರಿಕ ಅಂಕಗಳು ಸೇರಿ ಶೇ 33 ಅಂಕಗಳಿಗೆ ಉತ್ತೀರ್ಣತೆಯ ಮಾನದಂಡದ ಆದೇಶ ಮಾಡಿಸಿದ ಸಚಿವ ಮಧು ಬಂಗಾರಪ್ಪ ಅವರನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು.

ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎಚ್.ಜಿ.ಕುಮಾರ್, ಸೋಮವಾರಪೇಟೆ ತಾಲ್ಲೂಕು ಘಟಕದ ರಾಜ್ಯ ಪರಿಷತ್ ಸದಸ್ಯ ಕೆ.ಪಿ.ಜಯಕುಮಾರ್, ಉಪಾಧ್ಯಕ್ಷ ಯಶವಂತ್, ಜಿಲ್ಲಾ ನಿರ್ದೇಶಕ ಸತ್ಯ ನಾರಾಯಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.