ADVERTISEMENT

ಗರ್ವಾಲೆ ಗ್ರಾಮದ ಶ್ರೀ ಬೊಟ್ಲಪ್ಪ ಈಶ್ವರ ದೇವರ ಪೂಜೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 16:50 IST
Last Updated 2 ಮಾರ್ಚ್ 2021, 16:50 IST
ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮದ ಕೋಟೆಬೆಟ್ಟದ ಶ್ರೀ ಬೊಟ್ಲಪ್ಪ ಈಶ್ವರ ದೇವರ ಉತ್ಸವದಲ್ಲಿ ಗ್ರಾಮಸ್ಥರಿಂದ ಬೊಳಕ್ಕಾಟ್ ನಡೆಯಿತು
ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮದ ಕೋಟೆಬೆಟ್ಟದ ಶ್ರೀ ಬೊಟ್ಲಪ್ಪ ಈಶ್ವರ ದೇವರ ಉತ್ಸವದಲ್ಲಿ ಗ್ರಾಮಸ್ಥರಿಂದ ಬೊಳಕ್ಕಾಟ್ ನಡೆಯಿತು   

ಸೋಮವಾರಪೇಟೆ: ತಾಲ್ಲೂಕಿನ ಗರ್ವಾಲೆ ಗ್ರಾಮದ ಕೋಟೆಬೆಟ್ಟದ ಬೊಟ್ಲಪ್ಪ ಈಶ್ವರ ದೇವರ ಉತ್ಸವ ಮಂಗಳವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.

ದೇವಾಲಯ ಸಮಿತಿ ಅಧ್ಯಕ್ಷ ಡಿ.ಕೆ. ಸುಧಿ ಮಾತನಾಡಿ, ಬೊಟ್ಲಪ್ಪ ಈಶ್ವರ ದೇವಾಲಯದಲ್ಲಿ ಬಹಳ ಹಿಂದಿನಿಂದಲೂ ವಿಶೇಷ ವಾರ್ಷಿಕ ಪೂಜಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬುಧವಾರ ಸಂಜೆ ಈಶ್ವರ ದೇವರ ಪೂಜೆ ಕೊನೆಗೊಳ್ಳುವುದು. ನಂತರ ಮಧ್ಯರಾತ್ರಿ 12 ಗಂಟೆಗೆ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ಈ ಸಂದರ್ಭ ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಐ.ಕೆ. ಮಾಚಯ್ಯ, ದೇವರ ಸಮಿತಿಯ ಮುಖ್ಯಸ್ಥರಾದ ಟಿ.ಎನ್. ಈರಪ್ಪ, ಒ.ಪಿ. ಉತ್ತಪ್ಪ, ಎಚ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಎಂ.ಬಿ. ಅಭಿಮನ್ಯುಕುಮಾರ್ ಸೇರಿದಂತೆ ಊರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು. ಮಧ್ಯಾಹ್ನ ಪ್ರಾರಂಭವಾದ ಪೂಜೆಯ ನಂತರ ಊರಿನ ಗ್ರಾಮಸ್ಥರಿಂದ ಬೊಳಕ್ಕಾಟ್ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.