ADVERTISEMENT

ಕೋಟೆ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವ ಸಂಪನ್ನ

ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನಾಗದರ್ಶನ

​ಪ್ರಜಾವಾಣಿ ವಾರ್ತೆ
Published 12 ಮೇ 2025, 5:36 IST
Last Updated 12 ಮೇ 2025, 5:36 IST
ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು  ಶ್ರದ್ಧಾಭಕ್ತಿಯಿಂದ ನೆರವೇರಿತು.
ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು  ಶ್ರದ್ಧಾಭಕ್ತಿಯಿಂದ ನೆರವೇರಿತು.   

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು  ಶ್ರದ್ಧಾಭಕ್ತಿಯಿಂದ ನೆರವೇರಿತು.

ಇದರೊಂದಿಗೆ ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ ಹಾಗೂ ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವವೂ ಸಂಪನ್ನಗೊಂಡಿತು.

ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ 3 ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆದವು.

ADVERTISEMENT

ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ನಡೆಯಿತು. ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ಶ್ರದ್ಧಾಭಕ್ತಿಯಿಂದ ಜರುಗಿತು.

ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ಪ್ರಯುಕ್ತ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ, ನಾಗದರ್ಶನ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಉಡುಪಿಯ ಪೆರ್ಲಂಬಾಡಿಯ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಟ್ಟರು. ಸೇರಿದ್ದ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು  ಶ್ರದ್ಧಾಭಕ್ತಿಯಿಂದ ನೆರವೇರಿತು.
ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು  ಶ್ರದ್ಧಾಭಕ್ತಿಯಿಂದ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.