ಸುಂಟಿಕೊಪ್ಪ ಸಮೀಪದ ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆಯ ಕಿಟಕಿ ಗಾಜುಗಳನ್ನು ಒಡೆದುಹಾಕಿರುವ ಕಿಡಿಗೇಡಿಗಳು
ಸುಂಟಿಕೊಪ್ಪ: ಸಮೀಪದ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ರಾತ್ರಿ ಕಿಡಿಗೇಡಿಗಳು ಕಿಟಕಿ ಗಾಜುಗಳನ್ನು ಒಡೆದು ಹಾಕಿ, ಕುಡಿಯುವ ನೀರಿನ ನಲ್ಲಿ ಕಿತ್ತುಹಾಕಿದ್ದಾರೆ.
70ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕಳೆದ ವರ್ಷದಿಂದ ಎಲ್‌ಕೆಜಿ, ಯುಕೆಜಿ ಇಂಗ್ಲಿಷ್ ಮಾಧ್ಯಮ ತರಗತಿಗಳು ಪ್ರಾರಂಭಿಸಲಾಗಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ರಾತ್ರಿ ವೇಳೆ ಪುಂಡ ಪೋಕರಿಗಳು ಮದ್ಯಪಾನ ಮಾಡಿ ಖಾಲಿ ಬಾಟಲಿಗಳನ್ನು ಹಾಗೂ ಬೀಡಿ ಸಿಗರೇಟಿನ ತುಂಡನ್ನು ಶಾಲಾ ಆವರಣದಲ್ಲೇ ಎಸೆದು ಪುಂಡಾಟ ಮೆರೆದಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಶಾಲಾ ಮುಖ್ಯೋಪಾಧ್ಯಾಯರು ದೂರು ನೀಡಿದ್ದು. ಐಗೂರು ಗ್ರಾಮ ಪಂಚಾಯಿತಿ ವತಿಯಿಂದ ಮೂರು ಬಾರಿ ಕುಡಿಯುವ ನೀರಿನ ನಲ್ಲಿಯನ್ನು ದುರಸ್ತಿ ಪಡಿಸಲಾಗಿತ್ತು .ಪದೇ ಪದೇ ಪುಂಡಾಟ ಮೇರೆಯುವ ಈ ಪುಂಡ ಪೋಕರಿಗಳಿಗೆ ಪೊಲೀಸರು ಕಡಿವಾಣ ಹಾಕಬೇಕೆಂದು ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.
ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆಯ ನೀರಿನ ಪೈಪುಗಳನ್ನು ಕಿತ್ತೆಸೆದಿರುವ ಕಿಡಿಗೇಡಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.