ಸಿದ್ದಾಪುರ: ದೇವಾಲಯದ ಸಿಸಿಟಿವಿ ಕ್ಯಾಮೆರಾಗಳಿಗೆ ಬಟ್ಟೆ ಕಟ್ಟಿ , ಕಾಣಿಕೆ ಹುಂಡಿ ಮುರಿದು ಕಳ್ಳತನ ಮಾಡಿರುವ ಘಟನೆ ಅರೆಕಾಡು ಗ್ರಾಮದಲ್ಲಿ ನಡೆದಿದೆ.
ಅರೆಕಾಡು ಗ್ರಾಮದ ಬಲಂಜಿಕರೆಯ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬುಧವಾರ ರಾತ್ರಿ ಕಳ್ಳರು ನುಗ್ಗಿದ್ದು, ಹುಂಡಿಯಲ್ಲಿದ್ದ ಅಂದಾಜು ₹ 20 ಸಾವಿರವನ್ನು ಕಳವು ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ದೇವಾಲಯ ಸಮಿತಿ ಅಧ್ಯಕ್ಷ ರವಿ ಕುಮಾರ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸ್ಥಳ ಪರಿಶೀಲಿಸಿ ವಿಚಾರಣೆ ನಡೆಸಿದರು, ಸ್ಥಳಕ್ಕೆ ಪೋಲಿಸ್ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.