ನಾಪೋಕ್ಲು: ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಪ್ರಗತಿಯನ್ನು ಮೌಲ್ಯಮಾಪನ ಮಾಡುವ ನಿಟ್ಟಿನಲ್ಲಿ ಶಾಲಾ ಪರಿಸರ ಹಾಗೂ ವಿದ್ಯಾರ್ಥಿಗಳ ಸಾಧನೆ ಬಹುಮುಖ್ಯವಾಗಿದೆ ಎಂದು ಮರ್ಕಜುಲ್ ಗ್ಲೋಬಲ್ ಕೌನ್ಸಿಲ್‌ನ ಸಹಾಯಕ ನಿರ್ದೇಶಕ ಮರ್ಜುಕ್ ಸಹದಿ ಹೇಳಿದರು.
ಇಲ್ಲಿಗೆ ಸಮೀಪದ ಕೊಟ್ಟಮುಡಿಯ ಮರ್ಕಜುಲ್ ಶಾಲೆಯಲ್ಲಿ ಮರ್ಕಜುಲ್ ಹಿದಾಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಗೈಡಿಂಗ್ ಗ್ರೇಸ್ ಎಂಬ ಶೀರ್ಷಿಕೆಯಲ್ಲಿ ನಡೆದ ಪೋಷಕರ ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ಶಿಸ್ತು ಎಂಬ ವಿಷಯದ ಕುರಿತು ಅವರು ಮಾತನಾಡಿದರು.
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರವೂ ಪ್ರಮುಖವಾಗಿದೆ. ಮಕ್ಕಳ ಮಾನವ ವೈಜ್ಞಾನಿಕ ಬೆಳವಣಿಗೆಗೆ ಪೋಷಕರು ಹಾಗೂ ಶಿಕ್ಷಕರು ಸಮಾನ ಪಾತ್ರ ವಹಿಸಬೇಕು ಎಂದರು.
ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಖಾದರ್ ಮಾತನಾಡಿ, ನವೀನ ಶೈಕ್ಷಣಿಕ ತಂತ್ರಗಳು ಮೂಲಕ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಪೋಷಕರ ಸಹಕಾರ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾರ್ಕಸ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಮಹಮ್ಮದ್ ಹಾಜಿ ವಹಿಸಿದ್ದರು. ಸಭೆಯಲ್ಲಿ ಮರ್ಕಜುಲ್ ಹಿದಾಯ ಅಧೀನದಲ್ಲಿರುವ ವಿವಿಧ ಸಂಸ್ಥೆಯ ವಿದ್ಯಾರ್ಥಿಗಳ ಐನೂರಕ್ಕೂ ಅಧಿಕ ಪೋಷಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.