ಮಡಿಕೇರಿ: ‘ಸೆಪ್ಟೆಂಬರ್‌ನಲ್ಲಿ ಕ್ರಾಂತಿ ಆಗುವಂತದ್ದು ಏನೂ ಇಲ್ಲ. ಸಚಿವ ಕೆ.ಎನ್.ರಾಜಣ್ಣ ಅವರು ಯಾವ ಕಾರಣಕ್ಕೆ, ಯಾವ ಸಂದರ್ಭದಲ್ಲಿ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ’ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
‘ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಇದೆ, ಮುಖ್ಯಮಂತ್ರಿ ಇದ್ದಾರೆ, ಪಕ್ಷದ ಅಧ್ಯಕ್ಷರೂ ಇದ್ದಾರೆ. ನಮ್ಮ ಪಕ್ಷದ್ದು ಹೈಕಮಾಂಡ್ ಹೇಳಿದಂತೆ ನಡೆಯುವ ಪದ್ದತಿ. ಪಕ್ಷಕ್ಕೆ ಯಾವುದೇ ತೊಂದರೆಯಾಗುವ ಲಕ್ಷಣಗಳಿಲ್ಲ’ ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.