
ಪ್ರಜಾವಾಣಿ ವಾರ್ತೆಮಡಿಕೇರಿ: ತಾಲ್ಲೂಕಿನ 2 ಕಡೆ ಭಾನುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರಿಗೆ ಗಾಯಗಳಾಗಿವೆ.
ಕಾರೊಂದು ಸಂಪಾಜೆ ಗೇಟ್ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೋಡೆಗೆ ಡಿಕ್ಕಿಯಾಗಿ ಛಿದ್ರಛಿದ್ರವಾಗಿದೆ. ಇದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡರೆ, ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ವಿರಾಜಪೇಟೆಯಿಂದ ಮಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಾಳತ್‌ಮನೆ ಕಡೆಯಿಂದ ಮೇಕೇರಿ ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಒಬ್ಬರಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.