
ಮಡಿಕೇರಿ: ಕೊಡಗು ಜಿಲ್ಲೆಯ ಮೂವರು ಯುಎಇ ರಾಷ್ಟ್ರದಲ್ಲಿ ಸಿಲುಕಿದ್ದು ವಾಪಸ್ ಬರಲು ಪರದಾಡುತ್ತಿದ್ದಾರೆ.
ವೃದ್ಧ ದಂಪತಿ ಹಾಗೂ ಮತ್ತೊಬ್ಬ ಯುವಕ ಪ್ರವಾಸಕ್ಕಾಗಿ ಯುಎಇಗೆ ತೆರಳಿದ್ದರು. ಈ ವೇಳೆ ಯುದ್ದ ಆರಂಭವಾಗಿದ್ದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ, ತಮ್ಮನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಈ ಮೂವರು ಕುಟುಂಬದವರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಇನ್ನುಳಿದಂತೆ, ಕೊಡಗಿನ ಸಾಕಷ್ಟು ಮಂದಿ ದುಬೈ, ಬಹರೇನ್ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಸುರಕ್ಷಿತವಾಗಿದ್ದು, ಯಾವುದೇ ಸಹಾಯಕ್ಕಾಗಿ ಕರೆ ಬಂದಿಲ್ಲ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಜಿಲ್ಲಾಡಳಿತವು ಯುದ್ಧಪೀಡಿತ ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಸಿಲುಕಿದ್ದವರಿಗಾಗಿ ಸಹಾಯವಾಣಿ ಆರಂಭಿಸಿದೆ. ಅಪಾಯದಲ್ಲಿ ಸಿಲುಕಿದವರು ದೂ: 08272–221099, 221077 ವಾಟ್ಸ್‌ಆ್ಯಪ್ ಸಂಖ್ಯೆ 8550001077 ಸಂಪರ್ಕಿಸಬಹುದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.