ADVERTISEMENT

ಕೊಡಗಿನಲ್ಲಿ ಹುಲಿ ದಾಳಿ: 4 ಜಾನುವಾರು ಸಾವು

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 18:31 IST
Last Updated 24 ಜನವರಿ 2023, 18:31 IST
ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಹುಲಿ ದಾಳಿಗೆ ಮೃತಪಟ್ಟ ಹಸುವಿನ ಮೃತದೇಹವನ್ನು ಎಸಿಎಫ್ ನೆಹರೂ ಹಾಗೂ ಆರ್‌ಎಫ್‌ಒ ದೇವಯ್ಯ ವೀಕ್ಷಿಸಿದರು
ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಹುಲಿ ದಾಳಿಗೆ ಮೃತಪಟ್ಟ ಹಸುವಿನ ಮೃತದೇಹವನ್ನು ಎಸಿಎಫ್ ನೆಹರೂ ಹಾಗೂ ಆರ್‌ಎಫ್‌ಒ ದೇವಯ್ಯ ವೀಕ್ಷಿಸಿದರು   

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಮಂಗಳವಾರ ಹಸುವೊಂದನ್ನು ಹುಲಿ ಕೊಂದು ಹಾಕಿದೆ. 2 ದಿನಗಳಲ್ಲಿ ಒಟ್ಟು ನಾಲ್ಕು ಜಾನುವಾರುಗಳನ್ನು ಹುಲಿ ಕೊಂದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಸ್ಥಳಕ್ಕೆ ಎಸಿಎಫ್‌ ನೆಹರೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾ
ಧಿಕಾರಿ ದೇವಯ್ಯ, ‘ಈ ಭಾಗದಲ್ಲಿ ಎರಡು ಹುಲಿಗಳು ಸಂಚರಿಸು ತ್ತಿದ್ದು, ಪ್ರತ್ಯೇಕವಾಗಿ ದಾಳಿ ನಡೆಸುತ್ತಿವೆ. ಸ್ಥಳದಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಿ ಹುಲಿಯ ಚಲನವಲನ ಪತ್ತೆ ಹಚ್ಚಲಾಗುವುದು’ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT