ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ಮಂಗಳವಾರ ಹುಲಿಯೊಂದರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗುಂಡೇಟಿನ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆಯಷ್ಟೆ ಕಾರ್ಮಿಕರೊಬ್ಬರು ಹುಲಿ ದಾಳಿಗೆ ಮೃತಪಟ್ಟಿದ್ದರು. ಬಳಿಕ ಹುಲಿಯನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.
ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿದ್ದರೂ ಹುಲಿ ಪತ್ತೆ ಆಗಿರಲಿಲ್ಲ. ಆದರೆ, ಜಾನುವಾರುಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಹುಲಿ ಕೊಲ್ಲುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.