ಸುಂಟಿಕೊಪ್ಪ: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು.
ಉರಿಬಿಸಿಲಿನಿಂದ ಕೂಡಿದ್ದ ವಾತಾವರಣ ಸಂಜೆ 3.30 ನಂತರ ಮೋಡ ಆವರಿಸಿ ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿತ್ತು. ಸಂಜೆ 4 ಗಂಟೆಯಿಂದ ಎಡೆಬಿಡದೇ ಧಾರಾಕಾರವಾಗಿ ಸುರಿಯಿತು.
ರಭಸದ ಮಳೆಯಿಂದಾಗಿ ಜನಜೀವನ ಮತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಹರದೂರು ಮತ್ತು ಗುಂಡುಗುಟ್ಟಿ ಭಾಗದಲ್ಲಿ ಭಾರಿ ಮಳೆ ಸುರಿಯಿತು.
ಕೊಡಗರಹಳ್ಳಿ, ಕೆದಕಲ್, ಏಳನೇ ಹೊಸಕೋಟೆ, ಗರಗಂದೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.