ಮಡಿಕೇರಿ: ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಭಾಜನರಾಗಿದ್ದಾರೆ.
ಮೈಸೂರಿನ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ಸೆ.30ರಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಲಿದ್ದು, ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಕೃತಿ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.