ಸೋಮವಾರಪೇಟೆ ಕಿಬ್ಬೆಟ್ಟ ಗ್ರಾಮದಲ್ಲಿ ರಸ್ತೆಗೆ ಬಿದ್ದಿದ್ದ ಮರವನ್ನು ವಾಹನ ಚಾಲಕರು ಮತ್ತು ಮಾಲೀಕರು ತೆರವುಗೊಳಿಸಿದರು
ಸೋಮವಾರಪೇಟೆ: ಸಮೀಪದ ಕಿಬ್ಬೆಟ್ಟ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯ ಬಸ್ ತಂಗುದಾಣದ ಪಕ್ಕದಲ್ಲಿದ್ದ ಗೋಣಿಮರವೊಂದು ತುಂಡಾಗಿ ಬಿದ್ದಿದ್ದು, ಸುಮಾರು ಒಂದು ಗಂಟೆ ವಾಹನ ಸಂಚಾರ ಬಂದ್ ಆಗಿತ್ತು.
ಬೆಳಿಗ್ಗೆ 8ರಿಂದ 9ರ ಸಮಯದಲ್ಲಿ ಕಾರ್ಮಿಕರನ್ನು ಸಾಗಿಸುವ ವಾಹನಗಳು, ತೋಟಗಳಿಗೆ ತೆರಳುವವರು, ಸಾಕಷ್ಟು ಖಾಸಗಿ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.
ರಸ್ತೆಯಲ್ಲಿ ಬಿದ್ದಿದ್ದ ಮರವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತೆರವುಗೊಳಿಸಲಿಲ್ಲ. ಹೀಗಾಗಿ, ವಾಹನಗಳ ಚಾಲಕರು ಮತ್ತು ಮಾಲೀಕರೇ ವಾಹನಗಳಿಂದ ಹಣ ಸಂಗ್ರಹಿಸಿ ಖಾಸಗಿ ವ್ಯಕ್ತಿಯೊಬ್ಬರನ್ನು ಸ್ಥಳಕ್ಕೆ ಕರೆತಂದು ಮರವನ್ನು ತುಂಡರಿಸಿದರು. ನಂತರ ಒಟ್ಟಿಗೆ ಸೇರಿ ರಸ್ತೆಯ ಬದಿಗೆ ತಳ್ಳಿ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.