ADVERTISEMENT

ಬುಡಕಟ್ಟು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ: ಡಾ.ವಿಜಯ್

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 8:11 IST
Last Updated 28 ಜನವರಿ 2023, 8:11 IST
   

ಮಡಿಕೇರಿ: ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆಯುತ್ತಿರುವ 11 ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಬುಡಕಟ್ಟು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇಂದಿನ ಜರೂರು ಎಂದು ಪ್ರತಿಪಾದಿಸಿದರು.

ಕೊಡಗು ಜಿಲ್ಲೆಯಲ್ಲಿರುವ ಉಪೇಕ್ಷಿತ ಭಾಷೆಗಳಾದ ಎರವ, ಕುಡಿಯ, ಕುರುಬಗಳಂತಹ ವಿಶಿಷ್ಟ ಭಾಷೆಗಳನ್ನು ಉಳಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತ ಈ ಕಾರ್ಯದ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಶಾಲೆಗಳನ್ನು ಉಳಿಸುವುದು ಹಾಗೂ ಅಭಿವೃದ್ಧಿಪಡಿಸುವುದು ಸರ್ಕಾರವೊಂದರ ಜವಾಬ್ದಾರಿ ಅಲ್ಲ. ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು, ಕನ್ನಡ ಪ್ರೇಮಿಗಳು, ಸರ್ಕಾರೇತರ ಸಂಸ್ಥೆಗಳು ಪ್ರತಿ ಗ್ರಾಮಗಳಲ್ಲಿ ಇರುವ ಕನ್ನಡ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಡಿಜಿಟಲ್ ಮಾಧ್ಯಮದಲ್ಲಿ ಕನ್ನಡ ಪುಸ್ತಕಗಳನ್ನು ಪಸರಿಸುವ ಕುರಿತು ಚಿಂತನೆ ನಡೆಸಬೇಕು ಎಂದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.