
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಮಡಿಕೇರಿ: ಕಳೆದ ಹಲವು ವರ್ಷಗಳ ಹಿಂದೆ ಒಕ್ಕಲೆಬ್ಬಿಸಲಾಗಿತ್ತು ಎಂದು ಕೊಡಗು ಜಿಲ್ಲೆಯ ನಾಗರಹೊಳೆ ಅರಣ್ಯ ಪ್ರದೇಶದ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಸೋಮವಾರದಿಂದ ಜೇನುಕುರುಬ ಪಂಗಡಕ್ಕೆ ಸೇರಿದ 52 ಕುಟುಂಬಗಳು ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ.
ನಾಗರಹೊಳೆ ಹುಲಿ ಯೋಜನೆ ನಿರ್ದೇಶಕಿ ಪಿ.ಎ.ಸೀಮಾ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಇಲಾಖೆಯ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.
ಮಂಗಳವಾರ ಆದಿವಾಸಿಗಳನ್ನು ಮನವೊಲಿಸಲು ಇವರು ನಡೆಸಿದ ಪ್ರಯತ್ನ ವಿಫಲಗೊಂಡಿತ್ತು. ನಟ ಚೇತನ್ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಬುಧವಾರವೂ ಕೆಲವು ಹೋರಾಟಗಾರರು ಬಂದು ಬೆಂಬಲ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.