ADVERTISEMENT

ಸಿದ್ದಾಪುರ | ಗಾಂಜಾ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:52 IST
Last Updated 24 ಫೆಬ್ರುವರಿ 2026, 7:52 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಸಿದ್ದಾಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ನೆಲ್ಯಹುದಿಕೇರಿಯ ಬೆಟ್ಟದಕಾಡುವಿನಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ADVERTISEMENT

ಅನ್ಸಾದ್ ಹಾಗೂ ಅಫ್ರೀದ್  ಬಂಧಿತರು. ಇವರಿಂದ 324 ಗ್ರಾ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳುನೆಲ್ಯಹುದಿಕೇರಿಯ ಬೆಟ್ಟದಕಾಡುವಿನ ಗಣಪತಿ ದೇವಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿದ್ದಾಪುರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಅಥವಾ ಸೇವನೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.