
ಪ್ರಜಾವಾಣಿ ವಾರ್ತೆಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಸೋದರರಾದ ಬಾಳೇರ ಸಚಿನ್ (43) ಹಾಗೂ ಬಾಳೇರ ರೋಷನ್ (35) ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಗಾಯಗೊಂಡ ಇಬ್ಬರನ್ನೂ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಆಸ್ತಿ ವಿಚಾರಕ್ಕಾಗಿ ಈ ಗುಂಡಿನ ದಾಳಿ ನಡೆದಿದ್ದು, ಗುಂಡು ಹಾರಿಸಿದ ಆರೋಪದ ಮೇರೆಗೆ ತಿಮ್ಸ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಸಚಿನ್ ಅವರ ತೊಡೆ ಭಾಗಕ್ಕೆ ಹಾಗೂ ರೋಷನ್ ಅವರ ಕುತ್ತಿಗೆಯ ಭಾಗಕ್ಕೆ ಗುಂಡೇಟು ತಗುಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.