ADVERTISEMENT

ಹುಲಿ ದಾಳಿಗೆ ಎರಡು ಹಸು ಬಲಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 7:35 IST
Last Updated 6 ಡಿಸೆಂಬರ್ 2020, 7:35 IST
ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಗೆ ಬಲಿಯಾದ ಹಸು
ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಗೆ ಬಲಿಯಾದ ಹಸು   

ಪೊನ್ನಂಪೇಟೆ: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿವೆ.

ಬೆಸಗೂರು ಗ್ರಾಮದ ಪೊನ್ನಿಮಾಡ ದೊರೆ ಗಣಪತಿ ಅವರ ಕೊಟ್ಟಿಗೆಯಲ್ಲಿ ಶುಕ್ರವಾರ ರಾತ್ರಿ ಹುಲಿ ದಾಳಿ ಮಾಡಿ, ಹಸುವಿನ ಅರ್ಧ ಭಾಗ ತಿಂದು ಹೋಗಿದೆ.

ದೇವನೂರು ಗ್ರಾಮದ ಲಕ್ಷ್ಮೀಕಾಂತ್ ಅವರ ಹಸುವನ್ನು ಶನಿವಾರ ಮುಂಜಾನೆ ಮನೆಯ ಸಮೀಪ ಹುಲಿ ಕೊಂದು ಕಳೇಬರವನ್ನು ಬಿಟ್ಟು ತೆರಳಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

‘ಅರಣ್ಯ ಇಲಾಖೆ ಕಾಡುಪ್ರಾಣಿಗಳಿಂದ ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ತಾಲ್ಲೂಕು ಕೃಷಿ ಮೋರ್ಚಾ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.