ADVERTISEMENT

ಗಾಂಜಾ ಪತ್ತೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 13:09 IST
Last Updated 24 ಸೆಪ್ಟೆಂಬರ್ 2020, 13:09 IST

ವಿರಾಜಪೇಟೆ: ಪಟ್ಟಣದ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನ ತಡೆದು ಸವಾರರನ್ನು ತಪಾಸಣೆಗೊಳಪಡಿಸಿದಾಗ 45 ಗ್ರಾಂ ಗಾಂಜಾ ಪತ್ತೆಯಾಗಿದ್ದು, ವಾಹನವನ್ನು ವಶಕ್ಕೆ ಪಡೆದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕಿರುಗೂರು ಗ್ರಾಮದ ಸೋಮಣ್ಣ ಹಾಗೂ ಬಾಳುಗೋಡು ಗ್ರಾಮದ ಬೋಪಣ್ಣ ಬಂಧಿತರು.

ಡಿವೈಎಸ್‌ಪಿ ಸಿ.ಟಿ.ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ವೀಣಾ ನಾಯಕ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಪೊಲೀಸರು ಈ ಸಂಬಂಧ ಆರೋಪಿಗಳ ಮೊಬೈಲ್‌ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.